ಕೆಲವು ಸಂದರ್ಭದಲ್ಲಿ ಮಾತ್ರ ಪೆಲೆಟ್ ಗನ್ ಬಳಸಲು ಪೊಲೀಸರಿಗೆ ಅಧಿಕಾರವಿದೆ: SC

Picture of Savistara

Savistara

Bureau Report

ನವದೆಹಲಿ: ಕೆಲವು ಸಂದರ್ಭಗಳಲ್ಲಿ ಮಾತ್ರ ಪೆಲೆಟ್ ಗನ್ ಬಳಸಲು ಪೊಲೀಸರಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಪೆಲೆಟ್ ಗನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಕೋರಿ ‘ಕಾಕ್ರೋಚ್ ಜನತಾ ಪಾರ್ಟಿ’ ನಡೆಸಿದ ಸಂಸತ್‌ ಚಲೋ ಪ್ರತಿಭಟನೆ ವೇಳೆ, ಪೆಲೆಟ್ ಗನ್‌ಗಳ ದಾಳಿಯಿಂದ ಗಾಯಗೊಂಡಿರುವುದಾಗಿ ಹೇಳಿಕೊಂಡಿರುವ ಇಬ್ಬರು ಸಂತ್ರಸ್ತರು ಹಾಗೂ ಮಾಜಿ ಐಪಿಎಸ್ ಅಧಿಕಾರಿ ಯಶೋವರ್ಧನ್ ಆಜಾದ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.ದೆಹಲಿಯ ಜಂತರ್‌ಮಂತರ್‌ನಲ್ಲಿ ಜುಲೈ 20ರಂದು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್) ಬಳಸಿದ ಮದ್ದುಗುಂಡುಗಳ ಕುರಿತಾದ ದಾಖಲೆಯನ್ನು ಸುರಕ್ಷಿತವಾಗಿ ಕಾಯ್ದಿರಿಸುವಂತೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯಾ ಬಾಗ್ನಿ, ವಿ. ಮೋಹನಾ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಪೊಲೀಸ್‌ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ (ಬಿಪಿಆರ್‌ಡಿ) ಮಾರ್ಗಸೂಚಿಗಳನ್ನು ಉಲ್ಲೇಖಿಸಿದ ನ್ಯಾಯಪೀಠವು, ‘ಅಸಾಧಾರಣ ಸಂದರ್ಭಗಳಲ್ಲಿ ಪೆಲೆಟ್‌ ಗನ್‌ಗಳನ್ನು ಬಳಸಲು ಪೊಲೀಸರಿಗೆ ಅಧಿಕಾರವಿದೆ’ ಎಂದೂ ಸ್ಪಷ್ಟಪಡಿಸಿದೆ.

ಪ್ರತಿಭಟನೆಯಲ್ಲಿ ಪೆಲೆಟ್‌ ಗನ್‌ನಿಂದ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ದೆಹಲಿ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

[t4b-ticker]
error: Content is protected !!