ಕೊಡಗಿನಲ್ಲಿ ಕೊನೆಗೂ ಕಡಿಮೆಯಾದ ಮಳೆಯ ಆರ್ಭಟ – ಕಾವೇರಿ ನೀರಿನ ಮಟ್ಟ ಏರಿಕೆ

Picture of Savistara

Savistara

Bureau Report

ಕಳೆದ ಎರಡು ತಿಂಗಳಿನಿಂದ ಮಳೆ ಕೊರತೆಯಿಂದ ಬಳಲುತ್ತಿದ್ದ ಕೊಡಗು ಜಿಲ್ಲೆಯಲ್ಲಿ ಇದೀಗ ಮಳೆ ಚೇತರಿಕೆ ಕಂಡಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗುತ್ತಿದ್ದು, ಚಳಿಯ ವಾತಾವರಣ ನಿರ್ಮಾಣವಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆಯೊಂದಿಗೆ ಮೈಕೊರೆಯುವ ಚಳಿ ಆವರಿಸಿದೆ. ದಟ್ಟ ಮಂಜು ಕವಿದಿರುವ ಹಿನ್ನೆಲೆಯಲ್ಲಿ ಹೊಂಡ-ಗುಂಡಿಗಳಿಂದ ಕೂಡಿದ ರಸ್ತೆಗಳಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಾವೇರಿ ನದಿಯ ಉಗಮಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 78 ಮಿಲಿ ಮೀಟರ್ ಮಳೆ ದಾಖಲಾಗಿದ್ದು, ನದಿ ಪಾತ್ರದ ಪ್ರದೇಶಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗುತ್ತಿದೆ.ಜಿಲ್ಲೆಯ ಗಡಿ ಗ್ರಾಮವಾದ ಕರಿಕೆ ವ್ಯಾಪ್ತಿಯಲ್ಲಿ ಭಾರೀ ಮಳೆಯ ಪರಿಣಾಮ ದೊಡ್ಡ ಗಾತ್ರದ ಬಿದಿರು ಬುಡ ಸಮೇತ ರಸ್ತೆಗೆ ಉರುಳಿಬಿದ್ದಿದ್ದು, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತೆರವು ಕಾರ್ಯ ನಡೆಸಿದ ಬಳಿಕ ಸಂಚಾರ ಪುನಃ ಆರಂಭವಾಯಿತು.

[t4b-ticker]
error: Content is protected !!