ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ವ್ಯಕ್ತಿಯ ಬರ್ಬರ ಹತ್ಯೆ..!

Picture of Savistara

Savistara

Bureau Report

ಉಡುಪಿ: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮುಂಜಾನೆ ಮಹಿಳೆಯೊಂದಿಗೆ ಕಾರಿನಲ್ಲಿ ಕುಂದಾಪುರದ ಚರ್ಚ್‌ ರಸ್ತೆಗೆ ಬಂದಿದ್ದ ವೇಳೆ, ಹೋಲಿ ರೋಸರಿ ಚರ್ಚ್ ಎದುರು ಅಪರಿಚಿತ ವ್ಯಕ್ತಿಯೊಬ್ಬ ಪಿಸ್ತೂಲ್‌ನಿಂದ ಐವನ್ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ಗುಂಡೇಟಿನಿಂದ ತೀವ್ರ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಜೊತೆಯಲ್ಲಿದ್ದ ಮಹಿಳೆ ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಗೆ ಇನ್ನಷ್ಟೇ ಕಾರಣ ತಿಳಿದು ಬರಬೇಕಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಹಾಗೂ ಸೊಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.ಈ ಸಂಬಂಧ ಕುಂದಾಪುರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಯ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!