ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ

Picture of Savistara

Savistara

Bureau Report

ಆ.1ರಂದು ದ.ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಭಾರೀ‌ ಮಳೆ ಸುರಿಯುತ್ತಿರುವುದರಿಂದ‌ ಆ.1ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.

ಜು. 31ರಿಂದ ಆ. 2ರವರೆಗೆ ಕರ್ನಾಟಕದ ಕರಾವಳಿ ಸಮುದ್ರ ಪ್ರದೇಶದಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಬಿರುಸಿನ ಗಾಳಿ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಮುಂದಿನ 7 ದಿನಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

[t4b-ticker]
error: Content is protected !!