ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ, ಹವಾಮಾನ ಇಲಾಖೆ ಎಚ್ಚರಿಕೆ

Picture of Savistara

Savistara

Bureau Report

ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವುದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂಗಾರು ಮಾರುತಗಳ ಪ್ರಭಾವದಿಂದಾಗಿ ಆಗಸ್ಟ್ 5ರವರೆಗೆ ಕರ್ನಾಟಕದಾದ್ಯಂತ ವ್ಯಾಪಕವಾಗಿ ಮಳೆಯ ವಾತಾವರಣ ನಿರ್ಮಾಣವಾಗಲಿದೆ.ಈ ಹಿನ್ನೆಲೆಯಲ್ಲಿ ಕರಾವಳಿ ತೀರದ ಪ್ರದೇಶಗಳು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ. ಕಳೆದ ಕೆಲವು ವಾರಗಳಿಂದ ರಾಜ್ಯದ ಹಲವೆಡೆ ಮಳೆಯ ತೀವ್ರತೆ ಕೊಂಚ ತಗ್ಗಿತ್ತಾದರೂ, ಪ್ರಸ್ತುತ ಮೂಡಿರುವ ಹವಾಮಾನ ಬದಲಾವಣೆಗಳಿಂದಾಗಿ ವರುಣನ ಆರ್ಭಟ ಮತ್ತೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.

ವಿಶೇಷವಾಗಿ ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣದೊಂದಿಗೆ ತೇವಾಂಶಭರಿತ ಬಲವಾದ ಗಾಳಿ ಬೀಸುತ್ತಿದ್ದು, ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗುವ ಸಾಧ್ಯತೆಯಿದೆ. ಇದರಿಂದಾಗಿ ಮೀನುಗಾರರು ಕಡಲಿಗೆ ಇಳಿಯುವ ಮುನ್ನ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕರಾವಳಿ ರಕ್ಷಣಾ ಪಡೆ ಹಾಗೂ ತಜ್ಞರು ಜಾಗೃತಿ ಮೂಡಿಸಿದ್ದಾರೆ.ಉತ್ತರ ಒಳನಾಡಿನ ಒಣ ಹವೆಯ ವಾತಾವರಣವಿರುವ ಜಿಲ್ಲೆಗಳಲ್ಲೂ ಮಳೆಯ ಆರ್ಭಟ ಕಂಡುಬಂದಿದ್ದು, ಹಗುರದಿಂದ ಸಾಧಾರಣ ಪ್ರಮಾಣದ ಮಳೆ ಬೀಳುವ ನಿರೀಕ್ಷೆಯಿದೆ. ಈ ಸಾಧಾರಣ ಮಳೆಯು ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರಿಗೆ ವರದಾನವಾಗಲಿದೆ.ಹವಾಮಾನ ಇಲಾಖೆಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಗತ್ಯವಿದ್ದಲ್ಲಿ ಆಯಾ ಜಿಲ್ಲಾಡಳಿತಗಳು ಮುಂಜಾಗ್ರತಾ ಕ್ರಮವಾಗಿ ರಜೆ ಮಾರ್ಗಸೂಚಿಗಳನ್ನು ಪ್ರಕಟಿಸಲಿವೆ.

[t4b-ticker]
error: Content is protected !!