ಮಳೆ ಹಿನ್ನಲೆ-ನಾಳೆ ( ಆಗಸ್ಟ್ 3)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Picture of Savistara

Savistara

Bureau Report

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಸೋಮವಾರ (ಆ.03) ರಂದು ಜಿಲ್ಲೆಯಾದ್ಯಂತ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಮತ್ತು ಪದವಿ ಪೂರ್ವ (PU) ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ಆದೇಶ ಉಲ್ಲಂಘಿಸಿ ತರಗತಿಗಳನ್ನು ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯಿಸುವುದಿಲ್ಲ. ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.‌ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ನದಿ, ಹಳ್ಳ, ಕೊಳ್ಳ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

[t4b-ticker]
error: Content is protected !!