ಬೆಂಗಳೂರು: ಇಂದು ಸಂಜೆ 4.05 ಕ್ಕೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ ಎಂದು ಲೋಕಭವನ ಮಾಹಿತಿ ನೀಡಿದೆ.
ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸುವ ಜೊತೆಗೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಮೂರು ದಿನಗಳ ಹಿಂದೆಯೇ ಮಾಡಲಾಗಿದೆ. ಅಲ್ಲದೆ, ಬಂದೋಬಸ್ತಿಗೆ ಎರಡು ಸಾವಿರ ಪೊಲೀಸ್ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.








































