ಬಿಜೆಪಿ ಭದ್ರಕೋಟೆ ಭೇದಿಸಿದ ಪ್ರಶಾಂತ್ ಕಿಶೋರ್

Picture of Savistara

Savistara

Bureau Report

ಪಟ್ನಾ: ಬಿಹಾರದಲ್ಲಿ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿತವಾಗಿದ್ದ ‘ಬಾಂಕೀಪುರ’ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನ ಸುರಾಜ್ ಪಕ್ಷದ ಸಂಸ್ಥಾಪಕ ಹಾಗೂ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಗೆಲುವು ಸಾಧಿಸಿದ್ದಾರೆ.

ಪ್ರಶಾಂತ್ ಕಿಶೋ‌ರ್ ಅವರು ಬಿಜೆಪಿಯ ನೀರಜ್ ಕುಮಾರ್ ಸಿನ್ಹಾ ವಿರುದ್ಧ 18,953 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಜುಲೈ 30ರಂದು ಮತದಾನ ನಡೆದಿತ್ತು.2025ರ ವಿಧಾನಸಭೆ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಅವರ ಜೆಎಸ್‌ಪಿ ಪಕ್ಷವು ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಇದೀಗ ಕಿಶೋ‌ರ್ ಅವರ ಗೆಲುವಿನಿಂದಾಗಿ ಜನ ಸುರಾಜ್ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ.ಬಾಂಕೀಪುರ ಕ್ಷೇತ್ರದಲ್ಲಿ 1995ರ ಬಳಿಕ ಬಿಜೆಪಿ ಯಾವುದೇ ಚುನಾವಣೆಯಲ್ಲಿ ಸೋಲು ಕಂಡಿರಲಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಅವರು ರಾಜ್ಯಸಭೆಗೆ ಆಯ್ಕೆಯಾದ ನಂತರ ಕ್ಷೇತ್ರ ತೆರವಾಗಿತ್ತು.

ಕಳೆದ ವರ್ಷ ನಿತಿನ್ ನವೀನ್ ಅವರು ಆರ್‌ಜೆಡಿಯ ರೇಖಾ ಗುಪ್ತಾ ಅವರನ್ನು 50,000 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, ರಾಜ್ಯಸಭೆಗೆ ಆಯ್ಕೆಯಾದ ನಂತರ ನವೀನ್ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಸ್ತುತ ಉಪಚುನಾವಣೆಯಲ್ಲಿ ರೇಖಾ ಗುಪ್ತಾ ಅವರು ತೀವ್ರ ಹಿನ್ನಡೆ ಅನುಭವಿಸಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

[t4b-ticker]
error: Content is protected !!