ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು (ಸೋಮವಾರ) ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.ನೂತನ ಸಚಿವ ಪಟ್ಟಿ ಹೊರಬಿದ್ದ ಬೆನ್ನಲ್ಲೇ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.ಯಶವಂತರಾಯಗೌಡ ಪಾಟೀಲ, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು.








































