ಸಿರಿಬಾಗಿಲು-ಎಡಕುಮೇರಿ ಮಣ್ಣು ತೆರವು ಯಶಸ್ವಿ: ರೈಲು ಸಂಚಾರ ಮರುಆರಂಭ!

Picture of Savistara

Savistara

Bureau Report

ಸಿರಿಬಾಗಿಲು – ಎಡಕುಮೇರಿ ನಡುವೆ ಹಳಿ ಮೇಲೆ ಬಿದ್ದಿದ್ದ ಮಣ್ಣುನ್ನು ಯಶಸ್ವಿಯಾಗಿ ತೆರವುಗೊಳಿಸಲಾಗಿದ್ದು, ಈ ಭಾಗದಲ್ಲಿ ರೈಲು ಸಂಚಾರವನ್ನು ಅಧಿಕೃತವಾಗಿ ಪುನಾರಂಭಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ನಿನ್ನೆ (ಆಗಸ್ಟ್ 3) ಸಾಯಂಕಾಲ 7:25 ರ ವೇಳೆಗೆ ಹಳಿಯು ರೈಲು ಸಂಚಾರಕ್ಕೆ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ. ಇದಾದ ನಂತರ ರೈಲು ಸಂಖ್ಯೆ 17378 ದುರಸ್ತಿಗೊಳಿಸಿದ ಮಾರ್ಗದ (Km 73/700-500) ಮೂಲಕ ಯಶಸ್ವಿಯಾಗಿ ಸಂಚರಿಸುವ ಮೂಲಕ ಈ ಮಾರ್ಗವನ್ನು ಮರುಆರಂಭಿಸಿತು.

ಮುನ್ನೆಚ್ಚರಿಕೆ ಕ್ರಮವಾಗಿ ವೇಗ ಮಿತಿ ನಿಗದಿ: ರೈಲು ಮಾರ್ಗವನ್ನು ಸರಿಪಡಿಸಲಾಗಿದ್ದರೂ, ಪ್ರಯಾಣಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಭಾಗದಲ್ಲಿ ತಾತ್ಕಾಲಿಕವಾಗಿ 10 ಕಿ.ಮೀ/ಗಂಟೆ ವೇಗದ ಮಿತಿಯನ್ನು ವಿಧಿಸಲಾಗಿದೆ. ಲೋಕೋ ಪೈಲಟ್‌ಗಳು ಹಾಗೂ ಸಿಬ್ಬಂದಿ ಅತ್ಯಂತ ಎಚ್ಚರಿಕೆಯಿಂದ ರೈಲುಗಳನ್ನು ಚಲಾಯಿಸುತ್ತಿದ್ದಾರೆ. ಜೊತೆಗೆ, ಕುಸಿತ ಪೀಡಿತ ಪ್ರದೇಶದಲ್ಲಿ ಇನ್ನುಳಿದ ಕಾಮಗಾರಿ ಮತ್ತು ದುರಸ್ತಿ ಕಾರ್ಯಗಳು ಮುಂದುವರಿದಿವೆ.

ಪ್ರಯಾಣಿಕರ ಗಮನಕ್ಕೆ: ರೈಲು ಸಂಚಾರ ವ್ಯವಸ್ಥೆಯುಹಂತ ಹಂತವಾಗಿ ಯಥಾಸ್ಥಿತಿಗೆ ಮರಳುತ್ತಿರುವುದರಿಂದ ರೈಲುಗಳ ವೇಳಾಪಟ್ಟಿಯಲ್ಲಿ ಸಣ್ಣ ಪ್ರಮಾಣದ ವಿಳಂಬ ಉಂಟಾಗುವ ಸಾಧ್ಯತೆಯಿದೆ. ಪ್ರಯಾಣಿಕರು ಸಹಕರಿಸಬೇಕಾಗಿ ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ್ ಕನಮಡಿ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಕೇಂದ್ರದ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪ |ಪುತ್ತೂರಿನಲ್ಲಿ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪಾದಯಾತ್ರೆ, ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ

News Updates

ಸುಳ್ಯ : ಮುರುಳ್ಯ ರಕ್ತೇಶ್ವರಿ ದೇಗುಲ ವಿವಾದಕ್ಕೆ ಬಿಗ್ ಟ್ವಿಸ್ಟ್ – ವಕ್ಫ್ ಆದೇಶ ವಿರುದ್ಧ ಸಿಡಿದೆದ್ದ ಹಿಂದೂ ಸಮಾಜ | ಮುರುಳ್ಯದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ | ದ.ಕ. ಸಂಸದ ಕ್ಯಾ. ಚೌಟ, ಶಾಸಕಿ ಭಾಗೀರಥಿ ಮುರುಳ್ಯ ಸೇರಿದಂತೆ ಸಾವಿರಾರು ಮಂದಿ ಭಾಗಿ

[t4b-ticker]
error: Content is protected !!