ರಿಯಾಜ್ ಫರಂಗಿಪೇಟೆ ಪ್ರಚೋದನಕಾರಿ ಭಾಷಣ| 6 ತಿಂಗಳು ಜೈಲು ಮತ್ತು ದಂಡ

Picture of Savistara

Savistara

Bureau Report

ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆರೋಪಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತನಿಗೆ ಮಾನ್ಯ ನ್ಯಾಯಾಲಯವು 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ದಿನಾಂಕ 23-07-2015 ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ‘ಪಾಪುಲರ್ ಫ್ರಂಟ್ ಆಫ್ ಇಂಡಿಯಾ’ (PFI) ಬೆಳ್ತಂಗಡಿ ವಲಯ ಸಂಘಟನೆಯ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬಾತ ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗೆ ಧಕ್ಕೆಯುಂಟುಮಾಡುವ ರೀತಿಯಲ್ಲಿ ಉದ್ರೇಕಕಾರಿ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿದ್ದ ಎನ್ನಲಾಗಿದೆ.

ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 315/2015 ರಂತೆ, ಭಾರತೀಯ ದಂಡ ಸಂಹಿತೆ (IPC) ಕಲಂ 153(A) ಮತ್ತು 295(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್‌ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿಯಾಗಿದ್ದ ರವಿ ಬಿ.ಎಸ್‌. ಅವರು ಪ್ರಕರಣದ ಕಂಪ್ಲಿಟ್ ತನಿಖೆ ನಡೆಸಿ, ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (Charge Sheet) ಸಲ್ಲಿಸಿದ್ದರು.ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆದು, ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು, IPC ಕಲಂ 153(A) ಅಡಿಯಲ್ಲಿ ಆರೋಪಿಗೆ 6 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹10,000 ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತಾ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!