‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ರಾಜ್ಯ ಸಂಚಾಲಕಿಯಾಗಿ ರೂಪಾಲಿ ಎಸ್‌.ನಾಯ್ಕ ನೇಮಕ

Picture of Savistara

Savistara

Bureau Report

ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನದ ಸಂದೇಶ ಸಾರುವ ಭಾರತೀಯ ಜನತಾ ಪಕ್ಷದ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಕರ್ನಾಟಕದಲ್ಲಿ ವೇಗ ನೀಡಲು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರನ್ನು ರಾಜ್ಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ.ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿರುವ ರೂಪಾಲಿ ಎಸ್.ನಾಯ್ಕ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿದ್ದು, ಈ ಸಮಿತಿಯಲ್ಲಿ ಶಾಸಕರಾದ ಹರೀಶ್ ಪೂಂಜಾ, ಬಸವರಾಜ್‌ ಹಾಗೂ ಲಿಂಗರಾಜ್ ಪಾಟೀಲ್‌ ಸಹ ಸಂಚಾಲಕರಾಗಿದ್ದಾರೆ.ಸಂಚಾಲಕಿಯಾಗಿ ನೇಮಕಗೊಂಡ ತರುವಾಯ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಲು ರೂಪಾಲಿ ಎಸ್‌.ನಾಯ್ಕ ಚುರುಕಿನಿಂದ ಕಾರ್ಯೋನ್ಮುಖರಾಗಿದ್ದಾರೆ. ಈಗಾಗಲೆ ಕೆಲವೆಡೆ ಸಭೆಗಳನ್ನೂ ನಡೆಸಿದ್ದಾರೆ.

ಮನೆಮನೆಗೂ ರಾಷ್ಟ್ರಧ್ವಜ ತಲುಪಿಸುವುದು, ಸಾರ್ವಜನಿಕರಲ್ಲಿ ರಾಷ್ಟ್ರಧ್ವಜದ ಮಹತ್ವದ ಕುರಿತು ಅರಿವು ಮೂಡಿಸುವುದು, ಯುವಜನರು ಮತ್ತು ಮಹಿಳೆಯರನ್ನು ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುವುದು, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹರ್ ಘರ್ ತಿರಂಗಾ ಅಭಿಯಾನದಲ್ಲಿ ನಡೆಸಲಾಗುತ್ತದೆ. ‘ಹರ್ ಘರ್ ತಿರಂಗಾ’ ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ ದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವ ಹಾಗೂ ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ದೇಶಭಕ್ತಿಯ ಸಂದೇಶವನ್ನು ಜನರಿಗೆ ತಲುಪಿಸುವ ಅಭಿಯಾನವಾಗಿದೆ.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!