ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮೋಸ್ಟ್ ವಾಂಟೆಡ್ ಆರೋಪಿ ಕೊನೆಗೂ ಸೆರೆ; ಕೊಚ್ಚಿಯಲ್ಲಿ ಉಮರ್ ಫಾರೂಕ್ ಬಂಧನ

Picture of Savistara

Savistara

Bureau Report

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್‌ಐಎ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳದ ಕೊಚ್ಚಿಯಲ್ಲಿ ಬಂಧಿಸಿದ್ದು, ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿತ್ತು. ಆತನ ಬಂಧನಕ್ಕೆ 4 ಲಕ್ಷ ರೂ. ಬಹುಮಾನ ಕೂಡ ಎನ್‌ಐಎ ಘೋಷಿಸಿತ್ತು.

ಎನ್‌ಐಎ ತನಿಖೆ ಪ್ರಕಾರ, ಉಮ್ಮರ್ ಫಾರೂಕ್ ಪಿಎಫ್‌ಐ ಕಚೇರಿಯಲ್ಲಿ ನಡೆದ ಸಂಚು ಸಭೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ. ಪ್ರವೀಣ್ ನೆಟ್ಟಾರು ಹತ್ಯೆಗೂ ಮುನ್ನ ಆರೋಪಿಗೆ ಬೈಕ್ ನೀಡಿದ್ದ ಆರೋಪವೂ ಆತನ ಮೇಲಿತ್ತು. ಬಳಿಕ ಸಾಕ್ಷಿದಾರನ ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲೂ ಭಾಗಿಯಾಗಿದ್ದ ಆರೋಪ ಇತ್ತು.ಪಿಎಫ್‌ಐ ನೆರವಿನಿಂದ ಅಡಗಿಕೊಂಡಿದ್ದ ಆರೋಪಿ : ಹತ್ಯೆಯ ಬಳಿಕ ಪ್ರಮುಖ ಆರೋಪಿಗಳಿಗೆ ತಪ್ಪಿಸಿಕೊಳ್ಳಲು ಉಮ್ಮರ್ ಫಾರೂಕ್ ಸಹಾಯ ಮಾಡಿದ್ದ ಎನ್ನಲಾಗಿದ್ದು, ನಂತರ ಕೇರಳದ ಕೊಚ್ಚಿಯಲ್ಲೇ ಅಡಗಿಕೊಂಡಿದ್ದ. ನಿಷೇಧಿತ ಪಿಎಫ್‌ಐ ಸಂಘಟನೆಯ ಪ್ರಮುಖರು ಆತನಿಗೆ ಕೊಚ್ಚಿಯಲ್ಲಿ ಆಶ್ರಯ ನೀಡಿದ್ದರು ಎನ್ನಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಹೊರಗಿನ ಪ್ರಪಂಚಕ್ಕೆ ಕಾಣಿಸಿಕೊಳ್ಳದಂತೆ ಆತನನ್ನು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಉಮ್ಮರ್ ಕೊಚ್ಚಿಯಲ್ಲೇ ವಾಸ್ತವ್ಯ ಹೂಡಿದ್ದ ಎನ್ನಲಾಗಿದೆ.

[t4b-ticker]
error: Content is protected !!