ಡೀಸೆಲ್‌ಗೂ ಎಥೆನಾಲ್‌ ಮಿಶ್ರಣ ಮಾಡುವ ಸಾಧ್ಯತೆಯಿದೆ: ಅರವಿಂದ ಕೇಜ್ರವಾಲ್

Picture of Savistara

Savistara

Bureau Report

ನವದೆಹಲಿ: ಡೀಸೆಲ್ ಮತ್ತು ವಿಮಾನ ಇಂಧನದಲ್ಲೂ (ಎಟಿಎಫ್) ಎಥೆನಾಲ್‌ ಮಿಶ್ರಣ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ಆಮ್ ಆದ್ಮ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರವಾಲ್‌ ಆರೋಪಿಸಿದ್ದಾರೆ.

ಮುಂದಿನ ಕೆಲವು ವರ್ಷಗಳ ಕಾಲ ಹೊಸ ವಾಹನಗಳನ್ನು ಖರೀದಿಸದಂತೆ ಅವರು ಜನರಲ್ಲಿ ಮನವಿ ಮಾಡಿದ್ದಾರೆ.ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣವನ್ನು ಶೇ 20ರಿಂದ ಶೇ 50ಕ್ಕೆ ಹೆಚ್ಚಿಸುವ ಬಗ್ಗೆಯೂ ಕೇಂದ್ರ ಚಿಂತಿಸುತ್ತಿದೆ’ ಎಂದು ಹೇಳಿದ್ದಾರೆ.’ಪೆಟ್ರೋಲ್‌ಗೆ ಶೇ 20ಕ್ಕಿಂತ ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಣ ಮಾಡಲು ಹೊರಟಿರುವಂತೆ ತೋರುತ್ತಿದೆ. ಸಮಯ ಬಂದಾಗ ಅದನ್ನು ಮಾಡುತ್ತಾರೆ. ವಾಹನಗಳಿಗೆ ಇ20 ಪೆಟ್ರೋಲ್ ಅನ್ನು ಬಲವಂತವಾಗಿ ಹಾಕಿ ಹಾಳು ಮಾಡಿ ಆಯಿತು. ಈಗ ನಿವೇನಾದರೂ ಇ20 ಪೆಟ್ರೋಲ್‌ನಿಂದ ಚಲಿಸುವ ವಾಹನವನ್ನು ಖರೀದಿಸಿದರೆ, ಅದಕ್ಕೆ ಇ50 ಪೆಟ್ರೋಲ್ ಅನ್ನು ಬಲವಂತವಾಗಿ ಹಾಕಿ ಅದನ್ನೂ ಹಾಳು ಮಾಡುತ್ತಾರೆ’ ಎಂದು ಹೇಳಿದ್ದಾರೆ.

ಮುಂದುವರಿದು, ಇದೀಗ ಮೋದಿ ಸರ್ಕಾರ ಡೀಸೆಲ್ ಮತ್ತು ವಿಮಾನ ಇಂಧನದಲ್ಲೂ ಎಥೆನಾಲ್ ಮಿಶ್ರಣ ಮಾಡಲು ಯೋಜಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ವಿಮಾನ ಇಂಧನದಲ್ಲಿ ಎಥೆನಾಲ್ ಮಿಶ್ರಣ ಮಾಡುವುದರಿಂದ ವಿಮಾನಗಳ ಸುರಕ್ಷತೆಗೆ ಗಂಭೀರ ಧಕ್ಕೆ ತರಬಹುದು’ ಎಂದಿದ್ದಾರೆ.ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಕೇಜ್ರವಾಲ್, ಇ20 ಪೆಟ್ರೊಲ್ ಕುರಿತು ಕಳವಳ ವ್ಯಕ್ತಪಡಿಸಿದ್ದರು. ಪೆಟ್ರೋಲ್‌ ಬಂಕ್‌ಗಳಲ್ಲಿ ಶುದ್ಧ ಪೆಟ್ರೋಲ್ ಮತ್ತು ಇ20 ಇಂಧನ ಎರಡೂ ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ ಎಥೆನಾಲ್ ಮಿಶ್ರಿತ ಪೆಟ್ರೋಲ್‌ಗೆ ಕಡಿಮೆ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದ್ದರು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!