ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಿಂದ ಭಕ್ತರಿಗೆ ಮಹತ್ವದ ಸೂಚನೆ

Picture of Savistara

Savistara

Bureau Report

ಬಂಟ್ವಾಳ : ಪಣೋಲಿಬೈಲು ಶ್ರೀಕಲ್ಲುರ್ಟಿ ದೈವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲ ಹಾಗೂ ದೈವಸ್ಥಾನದ ಸಂಪ್ರದಾಯ, ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಹಲವು ಮಹತ್ವದ ಸೂಚನೆಗಳನ್ನು ಪ್ರಕಟಿಸಲಾಗಿದೆ.

ಹಿಂದೂ ಧಾರ್ಮಿಕ ಸಂಪ್ರದಾಯದಲ್ಲಿ ಮಗುವಿಗೆ ಮೊದಲ ಬಾರಿಗೆ ಅನ್ನ ನೀಡುವ ಪದ್ಧತಿಯಿದ್ದು, ಹರಕೆಯ ರೂಪದಲ್ಲಿ ದೇವಸ್ಥಾನದಲ್ಲಿ ಮಗುವಿಗೆ ಅನ್ನಪ್ರಸಾದ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ 6 ತಿಂಗಳಿಂದ 1 ವರ್ಷದೊಳಗಿನ ಮಕ್ಕಳಿಗೆ ದೈವಸ್ಥಾನದಲ್ಲಿ ಅನ್ನಪ್ರಸಾದ ನೀಡಲಾಗುವುದು ಎಂದು ತಿಳಿಸಲಾಗಿದೆ.

ಅಲ್ಲದೆ, ಬಾಲ್ಯವಿವಾಹವನ್ನು ನಿಷೇಧಿಸಲಾಗಿದ್ದು, ದೈವಸ್ಥಾನದ ಆವರಣದಲ್ಲಿ ಬಾಲ್ಯವಿವಾಹ ನಡೆಸದಂತೆ ಭಕ್ತಾಧಿಗಳಿಗೆ ಸೂಚಿಸಲಾಗಿದೆ. ಇದೇ ವೇಳೆ, ಆ.18ರಿಂದ ದೈವಸ್ಥಾನದಲ್ಲಿ ಅಗರಬತ್ತಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

ಭಕ್ತಾದಿಗಳು ದೈವಸ್ಥಾನದ ನಿಯಮಗಳು ಹಾಗೂ ಸಂಪ್ರದಾಯಗಳನ್ನು ಪಾಲಿಸಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೈವಸ್ಥಾನದ ಕಚೇರಿ ದೂರವಾಣಿ ಸಂಖ್ಯೆ 7090280166 ಸಂಪರ್ಕಿಸಬಹುದು.

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಅಂತಿಮ ಹಂತ ತಲುಪಿದ ಕೋಟೆಗಂಗೂರು ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ; ಸಂಸದ ಬಿ.ವೈ.ರಾಘವೇಂದ್ರ ಅವರ ನಿರಂತರ ಪರಿಶ್ರಮದ ಪ್ರತಿಫಲ | ಯೋಜನೆಗೆ ಇಲ್ಲಿವರೆಗೆ 58.82 ಕೋಟಿ ರೂ. ವೆಚ್ಚ; ನಿಲ್ದಾಣ ಹಾಗೂ ಸೇವಾ ಕಟ್ಟಡಗಳ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಸಕ್ತ ಸಾಲಿಗೆ 9.5 ಕೋಟಿ ರೂ. ಅನುದಾನ ಬಿಡುಗಡೆ

News Updates

ಮೋದಿ ಸರ್ಕಾರದ ಮಾತೃ ಆರೋಗ್ಯ ರಕ್ಷಣೆಯ ಉಪಕ್ರಮಗಳಿಗೆ ದೊರೆಯುತ್ತಿರುವ ಉತ್ತಮ ಫಲಿತಾಂಶ: ಕರ್ನಾಟಕದಲ್ಲಿ PMSMA ಅಡಿ ಪತ್ತೆಯಾದ 12 ಲಕ್ಷಕ್ಕೂ ಹೆಚ್ಚು ಅಪಾಯಕಾರಿ ಗರ್ಭಧಾರಣೆಗಳಿಗೆ ಅಗತ್ಯ ವೈದ್ಯಕೀಯ ನೆರವು; ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ

[t4b-ticker]
error: Content is protected !!