
ಸುಳ್ಯ ತಾಲೂಕು ಕಚೇರಿಗೆ ಇಂದು (ಆ.12) ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದರು. ಕಚೇರಿಯ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಲೋಕಾಯುಕ್ತ ಡಿವೈಎಸ್ ಪಿ ಹಾಲ್ ಮೂರ್ತಿ ರಾವ್ ನೇತೃತ್ವದ ತಂಡ ತಾಲೂಕು ಕಚೇರಿಗೆ ಭೇಟಿ ನೀಡಿದರು.
ತಾಲೂಕು ಕಚೇರಿಗೆ ಕೆಲಸಕ್ಕೆಂದು ಬಂದಿದ್ದ ಸಾರ್ವಜನಿಕರು ಅಧಿಕಾರಿಗಳೊಂದಿಗೆ ಸಮಸ್ಯೆ ಹೇಳಿಕೊಂಡರು. ಆ ಸಂದರ್ಭ ಆ ವಿಭಾಗದ ಅಧಿಕಾರಿಗಳನ್ನು ಕರೆದು ಕಡತಗಳ ವಿಚಾರಣೆ ನಡೆಸಿದರು. ಅರ್ಜಿಗಳ ವಿಲೇವಾರಿ ತಡವಾಗುತ್ತಿರುವುದಕ್ಕೂ ಸಿಬ್ಬಂದಿಗಳನ್ನು ಪ್ರಶ್ನಿಸಿದರು.
ಡಿವೈಎಸ್ ಪಿ ತಂಡದೊಂದಿಗೆ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ಪುಷ್ಪಾವತಿ, ಸುಧೀಪ್ ಹಾಗೂ ರವಿ ತಂಡದಲ್ಲಿದ್ದರು.







































