ಮೊಗ್ರು : ರಾಷ್ಟ್ರೀಯ ಹೆದ್ದಾರಿ -75 ರಸ್ತೆ ಸಂಪರ್ಕ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರ ವಿಚಾರ | ಅಧಿಕಾರಿಗಳ ಜೊತೆ ಪ್ರಮುಖರ ಸಭೆ ಆಗತ್ಯ ಕ್ರಮದ ಭರವಸೆ

Picture of Savistara

Savistara

Bureau Report

ಮೊಗ್ರು :ಅ. 14 ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆ ಬಳಿಯ ರಾಷ್ಟ್ರೀಯ ಹೆದ್ದಾರಿ -75 ರ ರಸ್ತೆಗೆ ಸಂಪರ್ಕ ಕುರಿತಾದ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಗೊಂದಲವನ್ನು ಮಾನ್ಯ ಲೋಕಸಭಾ ಸದಸ್ಯರಾದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಗಮನಕ್ಕೆ ತರಲಾಗಿದ್ದು, ತಕ್ಷಣ ಸ್ಪಂದಿಸಿದ ಸಂಸದರು ಹಾಗೂ ಶಾಸಕರು ತಕ್ಷಣ ಸ್ಟ್ರಕ್ಚರಲ್ ಇಂಜನಿಯರ್ ಪ್ರಸನ್ನ ದರ್ಬೆಯವರನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಂಗಳೂರು ಯೋಜನಾ ಘಟಕದ ಯೋಜನಾ ನಿರ್ದೇಶಕರಾದ ಅಬ್ದುಲ್ ಜಾವೇದ್ ಅಜ್ಮಿಯವರ ಜೊತೆ ಚರ್ಚಿಸಲು ಕಳುಹಿಸಿದರು. ಅ. 13 ರಂದು ಅವರ ಕಚೇರಿಯಲ್ಲಿ ಕಾರಣಿಕದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ಭಕ್ತರಿಗೆ ಅನುಕೂಲವಾಗುವ ಹಾಗೂ ಬಹು ನೀರಿಕ್ಷಿತ ಪ್ರವಾಸೋದ್ಯಮ ದೃಷ್ಟಿಯಿಂದ ಏನ್ಎಚ್ ರಸ್ತೆ ಬದಿಯ ಜಾಗ ಕಾಯ್ದಿದಿರಿಸುವ ಮತ್ತು ಅಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೇತುವೆಗೆ ಸಂಪರ್ಕಿಸುವ ರಸ್ತೆಯ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು. ಅ 14 ರಂದು ಪ್ರಸನ್ನ ದರ್ಬೆ ಯವರು ಸ್ಥಳಕ್ಕೆ ಏನ್ಎಚ್ಎಐ ಇಂಜಿನಿಯರ್ ಗಳೊಂದಿಗೆ ಬೇಟಿ ನೀಡಿ ಸಮಸ್ಯೆಯ ಕುರಿತು ಸೂಕ್ತ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು. ಈ ಬಗ್ಗೆ ಸ್ಥಳೀಯರು ತಕ್ಷಣ ಸ್ಪಂದಿಸಿದ ಜಿಲ್ಲೆಯ ಕ್ರಿಯಾಶೀಲ, ಹೆಮ್ಮೆಯ ಸಂಸದರಾದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾರವರಿಗೆ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಕಣಿಯೂರು ಮಹಾ ಶಕ್ತಿಕೇಂದ್ರದ ಅಧ್ಯಕ್ಷರು, ಬಂದಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಬಂದಾರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ, ಪುತ್ತೂರು ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಅದೇಶ್ ಶೆಟ್ಟಿ ಉಪ್ಪಿನಂಗಡಿ ,ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು,ಗ್ರೋಮಾ ಕನ್ಸ್ಟ್ರಕ್ಷನ್ ಅಧಿಕಾರಿಗಳಾದ ಜಯರಾಮ್,ಮೋಹನ್,ಇಂಜಿನಿಯರ್ ಗಳು ಉಪಸ್ಥಿತರಿದ್ದರು.

[t4b-ticker]
error: Content is protected !!