
ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ದಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ನಾಗರಪಂಚಮಿ ರಜೆ ನೀಡುವಂತೆ ಕರಾವಳಿ ಬಿಜೆಪಿ ಶಾಸಕರು,ಹಿಂದೂ ಪರ ಸಂಘಟನೆ ಸರ್ಕಾರ ವನ್ನು ಒತ್ತಾಯಿಸಿದ್ದರು.














































