ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವಿಡಿಯೋ | ಪೊಲೀಸ್‌ ದೂರು

Picture of Savistara

Savistara

Bureau Report

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲು ಯತ್ನಿಸಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋವೊಂದರ ವಿರುದ್ಧ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸ್‌ ಠಾಣೆಗೆ ದೂರು ನೀಡಿರುವ ಘಟನೆ ವರದಿಯಾಗಿದೆ.ನಾಗರ ಪಂಚಮಿ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದ್ದು, ರೂ.750 ಮುಂಗಡ ಹಣ ಪಾವತಿಸಿದರೆ ದೇವಸ್ಥಾನದ ಸೇವೆಗಳನ್ನು ನೆರವೇರಿಸಿ ಪ್ರಸಾದವನ್ನು ಕಳುಹಿಸಿಕೊಡಲಾಗುವುದು ಎಂದು ಅದರಲ್ಲಿ ಹೇಳುತ್ತಿರುವುದು ಕೇಳುತ್ತದೆ. ಇದರಿಂದ ಭಕ್ತರು ಮೋಸ ಹೋಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಾಗುತ್ತದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಹೆಸರನ್ನು ಬಳಸಿಕೊಂಡು ಈ ಹಿಂದೆ ಕೂಡ ಇಂತಹ ವಂಚನೆಗೆ ಯತ್ನಿಸಿದ ಘಟನೆಗಳು ನಡೆದಿವೆ. ಇಂತಹ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

[t4b-ticker]
error: Content is protected !!