ಬೆಂಗಳೂರು: ಬಿಡದಿ ಟೌನ್‌ಶಿಪ್ ವಿರೋಧಿಸಿ ಜೆಡಿಎಸ್ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಗಸ್ಟ್ 18ರಂದು (ಮಂಗಳವಾರ) ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದ್ದು, ಉದ್ಯಾನದ ಸುತ್ತಮುತ್ತ ರಸ್ತೆಗಳಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.
- ಕೆ.ಜಿ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲಕ್ಕೆ ತಿರುವು ಪಡೆದು ಸ್ವಾತಂತ್ರ್ಯ ಉದ್ಯಾನದ ಕಡೆಗೆ ಬರುವ ವಾಹನಗಳು ಕಡ್ಡಾಯವಾಗಿ ಪ್ಯಾಲೇಸ್ ರಸ್ತೆಯ ಕೆಳಸೇತುವೆ ಬಳಸಬೇಕು
- ಸ್ವಾತಂತ್ರ್ಯ ಉದ್ಯಾನ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ
- ಖೋಡೆ ಜಂಕ್ಷನ್ ಕಡೆಯಿಂದ ಕೆಆರ್ ವೃತ್ತದ ಕಡೆಗೆ ಹೋಗುವ ವಾಹನ ಸವಾರರು, ಹಳೆ ಜೆಡಿಎಸ್ ಕಚೇರಿ ರಸ್ತೆ ಬಳಸಬೇಕು
- ಸುಬ್ಬಣ್ಣ ಜಂಕ್ಷನ್‌ನಿಂದ ಎಂಟಿಆರ್ ಜಂಕ್ಷನ್ ಕಡೆಗೆ ಬರುವ ರಸ್ತೆಯು ಹಾಲಿ ಏಕಮುಖ ಸಂಚಾರ ರಸ್ತೆಯಾಗಿದ್ದು, ತಾತ್ಕಾಲಿಕವಾಗಿ ಆ ರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಗಾಂಧಿನಗರದ ಕಡೆಗೆ ಬರುವ ವಾಹನ ಚಾಲಕರು ಈ ರಸ್ತೆಯನ್ನು ಬಳಕೆ ಮಾಡಿಕೊಳ್ಳಬೇಕು
- ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್ ವರೆಗೆ, ವೈ ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ, ಕೆ.ಜಿ ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನಗಳ ಪಾರ್ಕಿಂಗ್ ಅವಕಾಶ ಇರುವುದಿಲ್ಲ













































