ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ ವಿಧಾನಪರಿಷತ್‌ ಉಪಸಭಾಪತಿಯಾಗಿ ಉಮಾಶ್ರೀ

Picture of Savistara

Savistara

Bureau Report

ಬೆಂಗಳೂರು: ವಿಧಾನಸಭೆಯ ಡೆಪ್ಯೂಟಿ ಸ್ಪೀಕ‌ರ್ ಸ್ಥಾನಕ್ಕೆಭಟ್ಕಳ ಶಾಸಕ ಮಂಕಾಳ್ ವೈದ್ಯ ಮತ್ತು ವಿಧಾನಪರಿಷತ್‌ ಉಪಸಭಾಪತಿಯಾಗಿ ಉಮಾಶ್ರೀ ಅವರು ಅವಿರೋಧ ಆಯ್ಕೆಯಾಗಿದ್ದಾರೆ.ಮಂಕಾಳ್ ವೈದ್ಯ ಮತ್ತು ಉಮಾಶ್ರೀ ಅವರು ಈ ಸ್ಥಾನಕ್ಕೆ ನಿನ್ನೆಯಷ್ಟೇ ನಾಮಪತ್ರ ಸಲ್ಲಿಸಿದ್ದರು. ಆ ಸ್ಥಾನಗಳಿಗೆ ಬೇರಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆ ಅವರಿಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಸಭಾಧ್ಯಕ್ಷ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ಅವರ ಹೆಸರನ್ನು ಪ್ರಸ್ತಾಪಿಸಲಾಯಿತು. ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಚಿವ ಲಕ್ಷ್ಮಣ್ ಸವದಿ ಅವರು ಮಂಕಾಳು ವೈದ್ಯ ಅವರ ಹೆಸರನ್ನು ಅನುಮೋದಿಸಿದರು. ಬಳಿಕ ಸದನ ಎಲ್ಲಾ ಸದಸ್ಯರ ಸರ್ವಾನುಮತದಿಂದ ಮಂಕಾಳ ವೈದ್ಯ ಅವರು ಉಪಸಭಾಧ್ಯಕ್ಷರಾಗಿ ಆಯ್ಕೆಯಾದರು. ಸ್ಪೀಕರ್ ಜಿ.ಎಸ್. ಪಾಟೀಲ್ ಅವರು ಧ್ವನಿ ಮತದ ನಂತರ ವೈದ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದಾರೆ ಎಂದು ಘೋಷಿಸಿದರು.

[t4b-ticker]
error: Content is protected !!