ಬೆಂಗಳೂರು: ‘ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆನಡೆಸಲಾಗುವುದು. ಕರಾವಳಿ ಭಾಗದ ಅಭಿವೃದ್ಧಿಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಕೇರಳ, ಗೋವಾ ರಾಜ್ಯಗಳು ಕರಾವಳಿ ಭಾಗವನ್ನು ಬಳಸಿಕೊಂಡಿರುವ ಮಾದರಿಯಲ್ಲೇ ಕರ್ನಾಟಕದಲ್ಲೂ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲು ಸರ್ಕಾರ ನಿರ್ಧರಿಸಿದ್ದು, ಪ್ರಾಕೃತಿಕ ಸಂಪತ್ತನ್ನು ಸದ್ಬಳಕೆ ಮಾಡಲಾಗುವುದು’ ಎಂದರು.’ರಾಜ್ಯದ 350 ಕಿ.ಮೀ ಉದ್ದದ ಕರಾವಳಿಯನ್ನು ಸಮೃದ್ಧ ಪರಿಸರ ಪ್ರವಾಸೋದ್ಯಮ ತಾಣವಾಗಿ ರೂಪಿಸಲಾಗುವುದು. ಅದಕ್ಕಾಗಿ ಅಲ್ಲೇ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ’ ಎಂದೂ ಅವರು ಹೇಳಿದರು.













































