ಎನ್‌ಎಚ್‌ಎಐ ವಿಶೇಷ ಭೂಸ್ವಾಧೀನಾಧಿಕಾರಿ ಬಳಿ ₹12.95 ಕೋಟಿ ಅಕ್ರಮ ಆಸ್ತಿ ಪತ್ತೆ

Picture of Savistara

Savistara

Bureau Report

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ (ಎನ್‌ಎಚ್‌ಎಐ) ವಿಶೇಷ ಭೂಸ್ವಾಧೀನಾಧಿಕಾರಿ ಮಲ್ಲಿಕಾರ್ಜುನ ಬಿ. ಅವರಿಗೆ ಸೇರಿದ 11 ಸ್ಥಳಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ₹12.95 ಕೋಟಿಯಷ್ಟು ಅಕ್ರಮ ಆಸ್ತಿ ಪತ್ತೆ ಮಾಡಿದ್ದಾರೆ.

ಮಲ್ಲಿಕಾರ್ಜುನ ವಿರುದ್ಧ ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಗರದ ಹಲವೆಡೆ ಇದ್ದ ಮಲ್ಲಿಕಾರ್ಜುನ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಅವರ ಮತ್ತು ಅವರ ಕುಟುಂಬದವರ ಹೆಸರಿನಲ್ಲಿ 100 ಎಕರೆ 5 ಗುಂಟೆ ಕೃಷಿ ಜಮೀನು ಇರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.ಅವರ ಒಟ್ಟಾರೆ ಆಸ್ತಿಯ ಮೌಲ್ಯ ₹18.33 ಕೋಟಿ. ಎರಡು ಬಂಗಲೆ ಮತ್ತು ಕೃಷಿ ಜಮೀನು ಸೇರಿ ಅವರ ಸ್ಥಿರಾಸ್ತಿಯ ಮೌಲ್ಯ ₹14.28 ಕೋಟಿ, ಚಿನ್ನಾಭರಣ, ನಗದು, ಕಾರುಗಳು ಮತ್ತು ಗೃಹೋಪಯೋಗಿ ವಸ್ತುಗಳು ಸೇರಿ ₹4.40 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ ಎಂದು ತಿಳಿಸಿವೆ.ಈವರೆಗೆ ₹1 ಕೋಟಿ ಮೊತ್ತದಷ್ಟು ಬ್ಯಾಂಕ್ ಠೇವಣಿ ಪತ್ತೆಯಾಗಿದ್ದು, ಕುಟುಂಬದವರ ಬ್ಯಾಂಕ್ ಖಾತೆ ಮತ್ತು ಲಾಕರ್‌ಗಳ ಪರಿಶೀಲನೆ ನಡೆಯುತ್ತಿದೆ ಎಂದು ಮಾಹಿತಿ ನೀಡಿವೆ.

₹2.53 ಕೋಟಿ ನಗದು

ಮಲ್ಲಿಕಾರ್ಜುನ ಬಿ. ಅವರ ಮನೆಯಲ್ಲಿ ₹2.53 ಕೋಟಿ ನಗದು ಪತ್ತೆಯಾಗಿದೆ. ₹500ರ ಮುಖಬೆಲೆಯ ಹಲವು ಕಂತುಗಳನ್ನು ಅವರ ಮನೆಯ ಅರಾ ಮತ್ತು ಲಾಕರ್‌ನಲ್ಲಿ ಇರಿಸಲಾಗಿತ್ತು. ಯಂತ್ರದ ಸಹಾಯದಿಂದ ನಗದನ್ನು ಎಣಿಸಿ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!