ಮಂಗಳೂರು: ವಂದೇ ಭಾರತ್ ರೈಲಿನ ಆಹಾರ ಪೂರೈಕೆ ವಾಹನ ತಪಾಸಣೆ

Picture of Savistara

Savistara

Bureau Report

ಮಂಗಳೂರು: ಕೇಂದ್ರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ಎಕ್ಸ್‌ಪ್ರೆಸ್ ರೈಲಿಗೆ ಆಹಾರ ಪೂರೈಸುವ ಕೇಟರಿಂಗ್ ವಾಹನವನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳು ಗುರುವಾರ ತಪಾಸಣೆ ನಡೆಸಿದರು.ರೈಲಿನಲ್ಲಿ ಪ್ರಯಾಣಿಕರಿಗೆ ಪೂರೈಸುವ ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆಹಾರ ತಯಾರಿಕೆ ಮತ್ತು ಸಾಗಣೆ ವೇಳೆ ಪಾಲಿಸಬೇಕಾದ ಸುರಕ್ಷತಾ ನಿಯಮಗಳನ್ನು ಅಧಿಕಾರಿಗಳು ಪರಿಶೀಲಿಸಿದರು. ಆಹಾರವನ್ನು ಸಾಗಿಸುವ ವಾಹನದಲ್ಲಿ ಸ್ವಚ್ಛತೆ ಕಾಪಾಡಲಾಗಿದೆಯೇ, ಆಹಾರವನ್ನು ಸೂಕ್ತ ರೀತಿಯಲ್ಲಿ ಸಂಗ್ರಹಿಸಲಾಗಿದೆಯೇ ಹಾಗೂ ನಿಗದಿತ ಮಾನದಂಡಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಯಿತು.ಆಹಾರ ಮತ್ತು ಔಷಧ ಸುರಕ್ಷತೆ ಉಲ್ಲಂಘನೆಗಳ ಕುರಿತು ಸಾರ್ವಜನಿಕರು ನೇರವಾಗಿ ದೂರು ನೀಡಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಕ್ಯೂಆರ್ ಕೋಡ್ ವ್ಯವಸ್ಥೆ ಜಾರಿಗೆ ತಂದಿರುವ ಬೆನ್ನಲ್ಲೇ ರೈಲ್ವೆ ಕೇಟರಿಂಗ್ ವ್ಯವಸ್ಥೆಯ ಮೇಲೂ ತಪಾಸಣೆ ವಿಸ್ತರಿಸಲಾಗಿದೆ.ಆಹಾರ ಸುರಕ್ಷತೆ ನಿಯಮಗಳ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ರೈಲ್ವೆ ಕ್ಯಾಂಟೀನ್‌ಗಳು ಹಾಗೂ ರೈಲುಗಳಲ್ಲಿ ಪೂರೈಸುವ ಆಹಾರವನ್ನೂ ತಪಾಸಣೆಯ ವ್ಯಾಪ್ತಿಗೆ ತರಲಾಗುತ್ತಿದೆ. ಪ್ರಯಾಣಿಕರಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಆಹಾರ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ.ಇತ್ತೀಚೆಗೆ ರಾಜ್ಯಾದ್ಯಂತ ಆಹಾರ ಮತ್ತು ಔಷಧ ಸುರಕ್ಷತೆ

ಕುರಿತು ವಿಶೇಷ ತಪಾಸಣೆ ನಡೆಸಲಾಗುತ್ತಿದ್ದು, ಪಿಜಿ, ಹಾಸ್ಟೆಲ್‌, ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು, ರೈಲ್ವೆ ಕ್ಯಾಂಟೀನ್‌ಗಳು ಹಾಗೂ ವಿಮಾನಗಳಲ್ಲಿ ಪೂರೈಸುವ ಆಹಾರ ಸೇರಿದಂತೆ ವಿವಿಧ ಸ್ಥಳಗಳಲ್ಲಿ ತಪಾಸಣೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.ಆಹಾರ ಮತ್ತು ಔಷಧ ಸುರಕ್ಷತೆ ಉಲ್ಲಂಘನೆಗಳ ಕುರಿತು ಸಾರ್ವಜನಿಕರು ನೇರವಾಗಿ ದೂರು ನೀಡಲು ಅನುಕೂಲವಾಗುವಂತೆ ಕ್ಯೂಆರ್ ಕೋಡ್ ವ್ಯವಸ್ಥೆಯನ್ನು ಸೋಮವಾರ(ಆ.17) ಉದ್ಘಾಟಿಸಿದ್ದ ಆರೋಗ್ಯ ಸಚಿವ ಯು.ಟಿ. ಖಾದರ್, ಇನ್ನು ಮುಂದೆ ಪಿಜಿ, ಹಾಸ್ಟೆಲ್‌, ಶಿಕ್ಷಣ ಸಂಸ್ಥೆಗಳು, ರೈಲ್ವೆ ಕ್ಯಾಂಟೀನ್‌ಗಳು, ವಿಮಾನಗಳಲ್ಲಿ ನೀಡುವ ಆಹಾರ ಸೇರಿದಂತೆ ಎಲ್ಲೆಡೆ ತಪಾಸಣೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!