ELECTION UPDATEವರ್ಷಾಂತ್ಯದೊಳಗೆ ಜಿ.ಪಂ, ತಾ.ಪಂ ಹಾಗೂ ಗ್ರಾ.ಪಂ ಚುನಾವಣೆ: ಸರ್ಕಾರದ ಸಿದ್ಧತೆ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ!

Picture of Savistara

Savistara

Bureau Report

ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳ ಜೊತೆಗೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಿಗೂ ಈ ವರ್ಷದ ಅಂತ್ಯದೊಳಗೆ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವಿಧಾನಪರಿಷತ್ ಸಭಾನಾಯಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.​ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರು ಪ್ರಸ್ತಾಪಿಸಿದ ಗಮನಸೆಳೆಯುವ ಸೂಚನೆಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಪರವಾಗಿ ಅವರು ಉತ್ತರಿಸಿದರು. ಪ್ರಸ್ತುತ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ತಕ್ಷಣ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸಲಾಗುವುದು. ಆ ಬಳಿಕ ವರ್ಷಾಂತ್ಯದ ವೇಳೆಗೆ ಚುನಾವಣೆ ನಡೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.​ಇನ್ನು ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳ ಚುನಾವಣೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗಿದೆ. ಜಿಲ್ಲಾಡಳಿತಗಳ ಸಿದ್ಧತೆ ಪೂರ್ಣಗೊಂಡ ತಕ್ಷಣ ಆಯಾ ಪಂಚಾಯಿತಿಗಳಿಗೂ ಚುನಾವಣೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!