ಚಿತ್ರರಂಗದ ಹಿರಿಯ ಕೊಂಡಿ ಕಳಚಿಬಿತ್ತು: ಪದ್ಮಶ್ರೀ ಪುರಸ್ಕೃತ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!

Picture of Savistara

Savistara

Bureau Report

ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಸೇರಿದಂತೆ ಬಹುಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ, ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತೆ ಸಾಹುಕಾರ್ ಜಾನಕಿ (94) ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.​ವಯೋಸಹಜ ಆರೋಗ್ಯ ಸಮಸ್ಯೆಗಳು ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ಐಸಿಯುನಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ದಕ್ಷಿಣ ಭಾರತೀಯ ಕಲಾವಿದರ ಸಂಘ (ನಡಿಗರ್ ಸಂಗಮ್) ದೃಢಪಡಿಸಿದೆ.​1950ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಕನ್ನಡದಲ್ಲಿ ಡಾ. ರಾಜ್‌ಕುಮಾರ್ ಅವರ ಜೊತೆ ‘ಮಹಿಷಾಸುರ ಮರ್ದಿನಿ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದರು. ಭಾರತೀಯ ಚಿತ್ರರಂಗಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಗೌರವಿಸಿ ಕೇಂದ್ರ ಸರ್ಕಾರ 2022ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!