ಸುಳ್ಯ : ಸಚಿವ ನಾಗೇಂದ್ರ ರಾಜೀನಾಮೆ,ಕಾಂಗ್ರೆಸ್ ಸರ್ಕಾರ ವೈಫಲ್ಯ ಖಂಡಿಸಿ ಬಿಜೆಪಿ ಪ್ರತಿಭಟನೆ | ರಾಮ ಮಂದಿರ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಪಂಜ ದೇಗುಲ ಆರ್ಥಿಕ ಪಾರದರ್ಶಕತೆ ಮೌನವೇಕೆ? : ವೆಂಕಟ್ ವಳಲಂಬೆ

Picture of Savistara

Savistara

Bureau Report

ಸುಳ್ಯ: ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ,ಹಣ ಲೂಟಿಯಾಗಿದ್ದು ಈ ಬಗ್ಗೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಸುಳ್ಯ ಬಿಜೆಪಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಮಾತನಾಡಿ” ಬಡವರ ಹಿತದಿಂದ ರಚನೆಗೊಂಡ ವಾಲ್ಮೀಕಿ ನಿಗಮದ ಹಣ ಲೂಟಿ ಬಡ ಪಲಾನುಭವಿಗಳಿಗೆ ಅನ್ಯಾಯ ಮಾಡಿದ್ದು ಈ ವಿಚಾರದಲ್ಲಿ ನೇರವಾಗಿ ಸಚಿವ ನಾಗೇಂದ್ರ ಭಾಗಿಯಾಗಿದ್ದು ತಕ್ಷಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು, ಕಾಂಗ್ರೆಸ್ ಸರ್ಕಾರ ಎಲ್ಲಾ ವಿಚಾರದಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ ಅಯೋಧ್ಯೆ ಶ್ರೀರಾಮ ಮಂದಿರ ಹಣ ದುರ್ಬಳಕೆ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರು ಅಲ್ಲಿ ವಿಶೇಷ ತನಿಖಾ ದಳ ರಚನೆ ಮಾಡಿ ತಪ್ಪಿತಸ್ಥರನ್ನು ಶಿಕ್ಷಗೆ ಒಳಪಡಿಸಿದ್ದಾರೆ ಆದರೆ ನಮ್ಮದೇ ಪಕ್ಕದ ಪಂಜ ಸೀಮೆಯ ದೇಗುಲದಲ್ಲಿ ಆರ್ಥಿಕ ಅವ್ಯವಹಾರ ಹಣ ಇನ್ನಿತರಕ್ಕೆ ದುರ್ಬಳಕೆ ಮಾಡಿರುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ? ಯಾಕೆ ಧಾರ್ಮಿಕ ಪರಿಷತ್ ಕ್ರಮ ಕೈಗೊಂಡಿಲ್ಲವೆಂದು ಕಾಂಗ್ರೆಸ್ ನಾಯಕರು ಉತ್ತರಿಸಬೇಕೆಂದು ಅಗ್ರಹಿಸಿದರು.

ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ,ವಿನಯ್ ಕಂದಡ್ಕ, ಪ್ರಮುಖರಾದ ಆಶಾ ತಿಮ್ಮಪ್ಪ, ಹರೀಶ್ ಕಂಜಿಪಿಲಿ,ಕುಸುಮಧಾರ ಎ.ಟಿ, ಶಿವಾನಂದ ಕುಕ್ಕುಂಬಳ,ಸುಭೋಧ್ ಶೆಟ್ಟಿ ಮೇನಾಲ,ಅವಿನಾಶ್ ಕುರುಂಜಿ,ಅಶೋಕ್ ಅಡ್ಕಾರು, ಪುಷ್ಪ ಮೇದಪ್ಪ,ಶಶಿಕಲಾ ನೀರಬಿದಿರೆ ಮತ್ತಿತ್ತ ಬಿಜೆಪಿ ಪ್ರಮುಖರು ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!