ದರ್ಬೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಬಂದ್‌ಗೆ ಕರೆ-ಸಂಜೀವ ಮಠಂದೂರು ಫೇಸ್ಟುಕ್ ಖಾತೆ ವಿರುದ್ಧ ಪ್ರಕರಣ ದಾಖಲು

Picture of Savistara

Savistara

Bureau Report

ಪುತ್ತೂರು: ದರ್ಬೆಯಲ್ಲಿ ಆ.21 ರಂದು ಅಂಗಡಿಯೊಂದರಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ವೈಮನಸ್ಸು ಹಾಗೂ ಸಾರ್ವಜನಿಕರಲ್ಲಿ ಭಯ ಉಂಟು ಮಾಡುವಂತಹ ಸಂದೇಶ ಪ್ರಸಾರ ಮಾಡಿ ಬಂದ್‌ಗೆ ಕರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.

“Sanjeeva Matandoor” ಎಂಬ ಫೇಸ್ ಬುಕ್ ಖಾತೆ ಹೊಂದಿರುವ ವ್ಯಕ್ತಿಯು ಬಂದ್‌ಗೆ ಕರೆ ಕೊಟ್ಟು, ಜನರು ಅಕ್ರಮವಾಗಿ ಸೇರಿ ಕಾನೂನುಬಾಹಿರ ಕೃತ್ಯ ಎಸಗಲು ಪ್ರೇರಣೆ ನೀಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್‌ . ಠಾಣೆಯಲ್ಲಿ ಅ.ಕ್ರ 102/2026, 0 353(2), 57, 189 BNS 2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದ್ದು, ಪೊಲೀಸ್ ಇಲಾಖೆ ಅನುಮತಿ ನೀಡಲಿದೆ. ಆದರೆ ಪ್ರತಿಭಟನೆಯ ದಿನಾಂಕ ಮತ್ತು ಸಮಯವನ್ನು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಯಾವುದೇ ಅನ್ಯ ಉದ್ದೇಶದಿಂದ ನಿಗದಿಪಡಿಸಿರುವುದು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!