ಬೈಂದೂರು ರೈಲು ನಿಲ್ದಾಣದ ಸಮಗ್ರ ಅಭಿವೃದ್ಧಿ: ಕೊಲ್ಲೂರು ಮೂಕಾಂಬಿಕಾ ಭಕ್ತರಿಗೆ ಸಂಸದ ಬಿ.ವೈ. ರಾಘವೇಂದ್ರ ಭರವಸೆ!

Picture of Savistara

Savistara

Bureau Report

ಬೈಂದೂರು: ಮೂಕಾಂಬಿಕಾ ರೋಡ್ ಬೈಂದೂರು ರೈಲ್ವೇ ನಿಲ್ದಾಣದ ಸಮಗ್ರ ಅಭಿವೃದ್ಧಿ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಭಕ್ತರ ಅನುಕೂಲಕ್ಕಾಗಿ ಕೈಗೊಳ್ಳಲಾಗಿರುವ ಪ್ರಮುಖ ಕಾಮಗಾರಿಗಳು ಹಾಗೂ ಯೋಜನೆಗಳ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

​ಪ್ರಮುಖ ಮುಖ್ಯಾಂಶಗಳು:

​ನಿಲ್ದಾಣದ ಮೇಲ್ದರ್ಜೆ: ಈ ಹಿಂದೆ ಕೇವಲ ಹಾಲ್ಟ್ ನಿಲ್ದಾಣವಾಗಿದ್ದ ಬೈಂದೂರು ರೈಲ್ವೇ ನಿಲ್ದಾಣವನ್ನು ₹2.64 ಕೋಟಿ ವೆಚ್ಚದಲ್ಲಿ ಸುಸಜ್ಜಿತ ನೂತನ ಕಟ್ಟಡ, ಗಣಕೀಕೃತ ಟಿಕೆಟ್ ಕಾದಿರಿಸುವಿಕೆ (PRS) ಮತ್ತು ಪ್ಲಾಟ್‌ಫಾರ್ಮ್ ವಿಸ್ತರಣೆಯೊಂದಿಗೆ ಮೇಲ್ದರ್ಜೆಗೇರಿಸಲಾಗಿದೆ. ​50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ: ಒಂದೂ ಎಕ್ಸ್‌ಪ್ರೆಸ್ ರೈಲು ನಿಲ್ಲದ ಈ ನಿಲ್ದಾಣದಲ್ಲಿ ಪ್ರಸ್ತುತ 50ಕ್ಕೂ ಹೆಚ್ಚು ಎಕ್ಸ್‌ಪ್ರೆಸ್ ರೈಲುಗಳು ನಿಲುಗಡೆಯಾಗುತ್ತಿದ್ದು, ನೂರಾರು ಸ್ಥಳೀಯ ಟ್ಯಾಕ್ಸಿ ಹಾಗೂ ಆಟೋ ಚಾಲಕರಿಗೆ ಉದ್ಯೋಗಾವಕಾಶ ದೊರೆತಿದೆ. ​

ಕೊಲ್ಲೂರು ಕ್ಷೇತ್ರದ ಅಧಿಕೃತ ನಿಲ್ದಾಣ: ಕೊಲ್ಲೂರು ದೇವಸ್ಥಾನದಿಂದ ಕೇವಲ 27 ಕಿ.ಮೀ. ದೂರದಲ್ಲಿರುವ ಈ ನಿಲ್ದಾಣವನ್ನು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರದ ಅಧಿಕೃತ ರೈಲು ನಿಲ್ದಾಣವಾಗಿ ಗುರುತಿಸಲು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣನವರಿಗೆ ಮನವಿ ಸಲ್ಲಿಸಲಾಗಿದೆ.

​₹86 ಕೋಟಿ ವೆಚ್ಚದ ಸಮಗ್ರ ಪ್ರಸ್ತಾವನೆ: ಉಡುಪಿ ಜಿಲ್ಲಾ ಕೇಂದ್ರದ ನಂತರ ಅತಿ ಹೆಚ್ಚು ಆದಾಯ ತರುವ ಈ ನಿಲ್ದಾಣವನ್ನು ‘ಸಂಪೂರ್ಣ ಸುಸಜ್ಜಿತ’ (Fully Fledged) ನಿಲ್ದಾಣವನ್ನಾಗಿ ರೂಪಿಸಲು ₹86.00 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ.​

ಹೆಚ್ಚುವರಿ ನಿಲುಗಡೆಗಳು & ಪ್ರವಾಸೋದ್ಯಮ: ಬಿಜೂರು ಹಾಗೂ ಸೇನಾಪುರ ರೈಲು ನಿಲ್ದಾಣಗಳಲ್ಲೂ ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಸಂಪರ್ಕ ವಿಸ್ತರಣೆಯಿಂದ ಮರವಂತೆ ಕಡಲತೀರ ಹಾಗೂ ಒತ್ತಿನೆಣೆ ಸೂರ್ಯಾಸ್ತ ತಾಣ ಸೇರಿದಂತೆ ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!