ಅಡಿಕೆ ಬೆಳೆಗಾರರ ಹಿತ ಕಾಯಲು ಬದ್ಧ -ಸಿ. ಎಂ ಡಿಕೆಶಿ

Picture of Savistara

Savistara

Bureau Report

ಬೆಂಗಳೂರು: ಅಡಿಕೆ ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾರೂ ಆತಂಕಪಟ್ಟುಕೊಳ್ಳಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಡಿಕೆ ಬೆಳೆಗಾರರ ನಿಯೋಗಕ್ಕೆ ಭರವಸೆ ನೀಡಿದ್ದಾರೆ

ಮಾಜಿ ಸಚಿವ ಹಾಗೂ ಶಾಸಕ ಅರಗ ಜ್ಞಾನೇಂದ್ರ ನೇತೃತ್ವದ ನಿಯೋಗವು ಸದಾಶಿವನಗರದಲ್ಲಿರುವ ಮುಖ್ಯಮಂತ್ರಿಗಳ ಮನೆಯಲ್ಲಿ ಭೇಟಿ ಮಾಡಿ, ಬೆಳೆಗಾರರ ಸಮಸ್ಯೆಯನ್ನು ವಿವರಿಸಿದರು. ಸರ್ಕಾರದ ನಿಲುವಿನಿಂದಾಗಿ ಬೆಳೆಗಾರರು ಆತಂಕದಲ್ಲಿದ್ದಾರೆ. ಬೆಳೆಗಾರರಿಗೆ ವಿರುದ್ಧವಾಗಿರುವ ಆದೇಶ ರದ್ದುಪಡಿಸಿ, ರಕ್ಷಣೆಗೆ ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು. ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಅಡಿಕೆ ಬಳಕೆ ಬಗ್ಗೆ ಇರುವ ತಪ್ಪು ಅಭಿಪ್ರಾಯವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಏನು ಆದೇಶವಾಗಿದೆ ಎನ್ನುವುದನ್ನು ತರಿಸಿ ನೋಡುತ್ತೇನೆ. ಬೆಳೆಗಾರರಿಗೆ ಯಾವ ಸಮಸ್ಯೆ ಆಗುವುದಕ್ಕೆ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಹೊನ್ನಾಳಿ ಶಾಸಕ ಶಾಂತನಗೌಡ, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಮತ್ತಿತರರು ನಿಯೋಗದಲ್ಲಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!