ಜಿಲ್ಲೆಯಲ್ಲಿ 87 ಜನರಿಗೆ H1N1 ದೃಢ: ಸೋಂಕು ತಡೆಗೆ ಬಿರುಸಿನ ಕಾರ್ಯಾಚರಣೆ!

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026ರಲ್ಲಿ ಇದುವರೆಗೆ ಒಟ್ಟು 87 ಎಚ್‌1ಎನ್‌1 (ಇನ್‌ಫ್ಲುಯೆಂಜಾ) ಪ್ರಕರಣಗಳು ದೃಢಪಟ್ಟಿದ್ದು, ರೋಗ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಂಪೂರ್ಣ ಸಜ್ಜಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (DHO) ಡಾ. ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ.

ರೋಗ ಪತ್ತೆ ಹಾಗೂ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿಗದಿತ ಕಣ್ಗಾವಲು ಕೇಂದ್ರಗಳನ್ನಾಗಿ ಗುರುತಿಸಲಾಗಿದೆ.​ತೀವ್ರ ಉಸಿರಾಟದ ಸಮಸ್ಯೆ ಇರುವವರು, ಗರ್ಭಿಣಿಯರು, ಕ್ಯಾನ್ಸರ್ ಮತ್ತು ಡಯಾಲಿಸಿಸ್ ರೋಗಿಗಳಿಗೆ ಹೆಚ್ಚಿನ ಅಪಾಯವಿರುವುದರಿಂದ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಚಿಕಿತ್ಸೆಗೆ ಅಗತ್ಯವಿರುವ ‘ಒಸಾಲ್ಟಮಿವಿರ್’ ಮಾತ್ರೆಗಳು, ಮಕ್ಕಳ ಸಿರಪ್‌ಗಳು ಹಾಗೂ ಸುರಕ್ಷತಾ ಪಿಪಿಇ ಕಿಟ್‌ಗಳು ಯಥೇಚ್ಛವಾಗಿ ಲಭ್ಯವಿವೆ. ಸಾರ್ವಜನಿಕರು ಕೆಮ್ಮುವಾಗ ಶಿಷ್ಟಾಚಾರ ಪಾಲಿಸುವುದು ಹಾಗೂ ನೈರ್ಮಲ್ಯ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!