ಸುಳ್ಯ: ಮಲೆನಾಡು ಜನಹಿತ ರಕ್ಷಣಾ ವೇದಿಕೆಯಿಂದ ರೈತರ ಸಮಾಲೋಚನಾ ಸಭೆ

Picture of Savistara

Savistara

Bureau Report

ಸುಳ್ಯ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ರೈತರ ಸಮಾಲೋಚನಾ ಸಭೆ ನಡೆಯಿತು.ರೈತರ ಬದುಕಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿ, ಪರಿಸರ ಸೂಕ್ಷ್ಮ ವಲಯ ಘೋಷಣೆ ಹಾಗೂ ಕಾಡಾನೆ ಹಾವಳಿಯಿಂದ ಕೃಷಿ ನಾಶವಾಗುತ್ತಿರುವ ಕುರಿತು ಶಾಶ್ವತ ಪರಿಹಾರ ಕೋರಿ ಈ ಸಭೆಯನ್ನು ಆಯೋಜಿಸಲಾಗಿತ್ತು.ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದವರು, ಕಸ್ತೂರಿರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದ ಕೃಷಿಕರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಆದ್ದರಿಂದ ಈ ವರದಿಯನ್ನು ಕೂಡಲೇ ತಡೆಹಿಡಿಯಬೇಕು ಎಂದು ಒತ್ತಾಯಿಸಿದರು.ಅಲ್ಲದೆ ಸುಳ್ಯ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ರೈತರ ಬೆಳೆ ಸಂಪೂರ್ಣ ನಾಶವಾಗುತ್ತಿದೆ. ಇದಕ್ಕೆ ಸೂಕ್ತ ಪರಿಹಾರ ಹಾಗೂ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರಕಾರವನ್ನು ಒತ್ತಾಯಿಸಲಾಯಿತು.ಈ ಸಂದರ್ಭದಲ್ಲಿ ವೇದಿಕೆಯ ಪ್ರಮುಖರಾದ ಅವಿನಾಶ್ ಕುರುಂಜಿ, ಚಂದ್ರಾ ಕೊಲ್ಚರ್, ಸಿಎ ಬ್ಯಾಂಕ್ ಸಿಇಒ ಸುದರ್ಶನ್ ಸೂರ್ತಿಲ, ಪ್ರಭಾಕರ್ ರೈ, ಶಿವರಾಮ್ ಕೆರ್ಪಳ, ಮಿಲನ್ ಬಿ, ಅಶೋಕ್ ಮೂಲೆಮಜಲು, ಜೆ.ಪಿ. ಕೂಜುಗೋಡು, ಹೇಮಂತ್ ಕಂದಡ್ಕ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!