ವಾಲ್ಮೀಕಿ ನಿಗಮ ಹಗರಣ: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ!

Picture of Savistara

Savistara

Bureau Report

ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪದ ಸುಳಿಯಲ್ಲಿ ಸಿಲುಕಿರುವ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ​ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವಕ್ಕೆ ತಲುಪಿಸಿದ್ದಾರೆ. ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸ್ವಯಂಪ್ರೇರಿತರಾಗಿ ಈ ನಿರ್ಧಾರ ಕೈಗೊಂಡಿದ್ದಾರೆನ್ನಲಾಗಿದೆ. ಹಗರಣವನ್ನು ಖಂಡಿಸಿ ಹಾಗೂ ನಾಗೇಂದ್ರ ಅವರ ರಾಜೀನಾಮೆಗೆ ಪಟ್ಟುಹಿಡಿದು ವಿರೋಧ ಪಕ್ಷಗಳು ‘ಬಳ್ಳಾರಿ ಚಲೋ’ ಪಾದಯಾತ್ರೆ ಸೇರಿದಂತೆ ಹಲವು ಹೋರಾಟಗಳಿಗೆ ಸಜ್ಜಾಗಿದ್ದವು. ಈ ಪ್ರತಿಭಟನೆಗಳು ತೀವ್ರಗೊಳ್ಳುವ ಮುನ್ನವೇ ಕೈಗೊಂಡ ಈ ನಿರ್ಧಾರ ಸದ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿದೆ. ​ಈ ರಾಜೀನಾಮೆಯನ್ನು ಅಂಗೀಕರಿಸುವ ಕುರಿತು ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳ ಅಂತಿಮ ನಿರ್ಧಾರ ಏನಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!