ಕಸ್ತೂರಿರಂಗನ್ ವರದಿ ಜಾರಿ ವಿರುದ್ಧ ಬಿಜೆಪಿ ಗರಂ: ಶಿವಮೊಗ್ಗದಲ್ಲಿ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಮುಖರ ಮಹತ್ವದ ಸಭೆ!

Picture of Savistara

Savistara

Bureau Report

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಶಿವಮೊಗ್ಗ ವಿಭಾಗ ಮಟ್ಟದ (ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳು) ಪಕ್ಷದ ಪ್ರಮುಖರ ವಿಶೇಷ ಸಭೆ ನಡೆಯಿತು.

ಈ ಸಭೆಯಲ್ಲಿ ಮಲೆನಾಡು ಭಾಗದಲ್ಲಿ ಕಸ್ತೂರಿರಂಗನ್ ವರದಿ ಕರಡು ಜಾರಿಯಿಂದ ಸ್ಥಳೀಯ ಜನರ ಮೇಲಾಗುವ ಗಂಭೀರ ಪರಿಣಾಮಗಳ ಕುರಿತು ಸುದೀರ್ಘವಾಗಿ ಚರ್ಚಿಸಿ, ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ಧಪಡಿಸಲಾಯಿತು.​ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಯ ಜೊತೆಗೆ ಮಲೆನಾಡಿನ ಜನರ ಜೀವನೋಪಾಯ, ಮೂಲಭೂತ ಹಕ್ಕುಗಳು ಹಾಗೂ ಹಿತಾಸಕ್ತಿಗಳನ್ನು ಕಾಯುವುದು ಪಕ್ಷದ ಮೊದಲ ಆದ್ಯತೆಯಾಗಿದೆ ಎಂದು ಈ ವೇಳೆ ನಾಯಕರು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಸಂಸದ ರಾಘವೇಂದ್ರ ಬಿ. ವೈ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ನಾಯಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಆರಗ ಜ್ಞಾನೇಂದ್ರ, ಸಿ.ಟಿ. ರವಿ, ಆರ್.ಕೆ. ಸಿದ್ಧರಾಮಣ್ಣ ಹಾಗೂ ಕುಮಾರಸ್ವಾಮಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಮತ್ತು ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!