ಕಸ್ತೂರಿ ರಂಗನ್ ವರದಿ; ಜಂಟಿ ಸಮೀಕ್ಷೆ ನಡೆಸಿ: ಸಿಎಂಗೆ ಸಂಸದ ರಾಘವೇಂದ್ರ ಮನವಿ

Picture of Savistara

Savistara

Bureau Report

ಶಿವಮೊಗ್ಗ: ‘ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲ್ಲೆಗಳ ಅರಣ್ಯ ಪ್ರದೇಶಗಳ ಕುರಿತು ಜಂಟಿ ಸಮೀಕ್ಷೆ ನಡೆಸಿ, ವಾಸ್ತವ ಸ್ಥಿತಿಯನ್ನು ಪರಿಶೀಲಿಸಬೇಕು’ ಎಂದು ಸಂಸದ ಬಿ.ವೈ. ರಾಘವೇಂದ್ರ ಮುಖ್ಯಮಂತ್ರಿಗೆ ಮನವಿ ಮಾಡಿದರು.

‘ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಪ್ರಕಟವಾಗಿದ್ದು, ಇದರಿಂದ ರಾಜ್ಯದ ಶಿವಮೊಗ್ಗ ಸೇರಿ 10 ಜಿಲ್ಲೆಗಳ 1,439 ಗ್ರಾಮಗಳ ರೈತರು ಹಾಗೂ ಕೂಲಿ ಕಾರ್ಮಿಕರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವರದಿ ಜಾರಿಯಿಂದ ಮಲೆನಾಡಿನ ಜನರಲ್ಲಿ ಆತಂಕ ಉಂಟಾಗಿದೆ’ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.’ರಾಜ್ಯದ ಒಟ್ಟು ಅರಣ್ಯ ಪ್ರದೇಶದ ಪ್ರಮಾಣ ಗಮನಿಸಿದರೆ ಕರ್ನಾಟಕವು ದೇಶದಲ್ಲಿ ಪ್ರಮುಖ ಸ್ಥಾನದಲ್ಲಿದೆ. ಮಹಾರಾಷ್ಟ್ರದ ನಂತರ ಕರ್ನಾಟಕದಲ್ಲಿ ಹೆಚ್ಚಿನ ಅರಣ್ಯ ಪ್ರದೇಶವಿದ್ದು, ಮಲೆನಾಡಿನ ಪರಿಸರ ವ್ಯವಸ್ಥೆಯ ಸಂರಕ್ಷಣೆಯೂ ಅತ್ಯಂತ ಮುಖ್ಯವಾಗಿದೆ. ಆದರೆ, ಪರಿಸರ ರಕ್ಷಣೆಯ ಹೆಸರಿನಲ್ಲಿ ರೈತರ ಕೃಷಿ ಭೂಮಿ ಹಾಗೂ ಗ್ರಾಮೀಣ ಜನರ ಬದುಕಿಗೆ ತೊಂದರೆಯಾಗಬಾರದು’ ಎಂದರು.’ಕಸ್ತೂರಿ ರಂಗನ್ ವರದಿಯ ಹಿಂದಿನ ಕರಡು ಪ್ರಸ್ತಾವಗಳ ಸಂದರ್ಭದಲ್ಲಿಯೂ ರಾಜ್ಯ ಸರ್ಕಾರಗಳು ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸಿದ್ದವು. ಹಿಂದಿನ ಸರ್ಕಾರದ ಅವಧಿಯಲ್ಲಿ ಅರಣ್ಯ ಪ್ರದೇಶದ ವ್ಯಾಪ್ತಿಯನ್ನು ಕಡಿತಗೊಳಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಅದೇ ರೀತಿ ಈಗಲೂ ರಾಜ್ಯದ ಹಿತದೃಷ್ಟಿಯಿಂದ ಸ್ಪಷ್ಟ ನಿಲುವು ತೆಗೆದುಕೊಳ್ಳುವ ಅಗತ್ಯವಿದೆ’ ಎಂದು ತಿಳಿಸಿದರು.

ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಹಯೋಗದಲ್ಲಿ ಜಂಟಿ ಸಮೀಕ್ಷೆ ನಡೆಸಬೇಕು.’ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಿ, ಆಯಾ ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ನಡೆಸಬೇಕು. ಜನವಸತಿ ಹಾಗೂ ಕೃಷಿ ಪ್ರದೇಶಗಳನ್ನು ವಾಸ್ತವಿಕವಾಗಿ ಗುರುತಿಸಿ, ಅಂತಿಮ ಕರಡು ಅಧಿಸೂಚನೆಯಲ್ಲಿ ಸ್ಪಷ್ಟತೆ ನೀಡಬೇಕು’ ಎಂದು ಒತ್ತಾಯಿಸಿದರು..

ಶಾಸಕ ಎಸ್.ಎನ್. ಚನ್ನಬಸಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಬಿಜೆಪಿ ಉಸ್ತುವಾರಿ ಸಿದ್ದರಾಮಣ್ಣ ಇದ್ದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!