ದಕ್ಷಿಣ ಕನ್ನಡದಲ್ಲಿ ಕೇಂದ್ರ ಯೋಜನೆಗಳ ಪ್ರಗತಿ ಪರಿಶೀಲನೆ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅಧ್ಯಕ್ಷತೆಯಲ್ಲಿ ‘ದಿಶಾ’ ಸಭೆ!

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆಯು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಸಂಸದರು ಸಮಗ್ರ ಪರಾಮರ್ಶೆ ನಡೆಸಿ, ಕೆಲಸಗಳನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.​ವಿಶೇಷವಾಗಿ ಪಿಎಂ ಜನ್ ಮನ್, ಪಿಎಂ ರಹಾತ್ ಹಾಗೂ ಪಿಎಂ ಸೂರ್ಯ ಘರ್ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಹಾಗೂ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಈ ಪ್ರಮುಖ ಸಭೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್ ಯು, ಉಮಾನಾಥ ಕೋಟ್ಯಾನ್, ವೇದವ್ಯಾಸ್ ಕಾಮತ್, ಭಾಗೀರಥಿ ಮುರುಳ್ಯ, ಜಿಲ್ಲಾಧಿಕಾರಿ ಎಚ್‌ವಿ ದರ್ಶನ್‌, ಜಿಲ್ಲಾ ಪಂಚಾಯತ್ ಸಿಇಒ ನಾರ್ವಡೆ ವಿನಾಯಕ ಕರ್ಬಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]
error: Content is protected !!