ವಿಶ್ವ ಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆ ವತಿಯಿಂದ ನಾಳೆ (ಆ. 31) ಪುತ್ತೂರು ಚಲೋ

Picture of Savistara

Savistara

Bureau Report

ದರ್ಬೆಯಲ್ಲಿ ಹಿಂದೂ ಮಹಿಳಾ ವರ್ತಕಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಹಾಗೂ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಹಿಂದು ಜಾಗರಣ ವೇದಿಕೆ ವತಿಯಿಂದ ಆಗಸ್ಟ್ 31ರಂದು ಬೆಳಿಗ್ಗೆ 10:30ಕ್ಕೆ ಬೃಹತ್ ಚಲೋ ಹಮ್ಮಿಕೊಳ್ಳಲಾಗಿದೆ. ನೂರಾರು ಮಂದಿ ಏಕಕಾಲದಲ್ಲಿ ಸೇರಿ ಅಂಗಡಿಯಲ್ಲಿದ್ದವರ ಮೇಲೆ ದಾಳಿ ನಡೆಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ್ದು, ಇದೊಂದು ವ್ಯವಸ್ಥಿತ ಹಾಗೂ ಸಂಘಟಿತ ಅಪರಾಧವಾಗಿದೆ ಎಂದು ಸಂಘಟಕರು ಆರೋಪಿಸಿದ್ದಾರೆ. ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ದರ್ಬೆ ವೃತ್ತದವರೆಗೆ ಈ ಬೃಹತ್ ಜನಾಂದೋಲನ ನಡೆಯಲಿದೆ.​ದೌರ್ಜನ್ಯಕ್ಕೆ ಒಳಗಾದ ಮಹಿಳೆ ಹಾಗೂ ಆಕೆಯ ರಕ್ಷಣೆಗೆ ಬಂದ ಮಗನ ಮೇಲೆಯೇ ಕೊಲೆ ಯತ್ನ ಪ್ರಕರಣ ದಾಖಲಿಸಿ ಜೈಲಿಗೆ ಅಟ್ಟಿರುವ ಪೊಲೀಸ್ ಇಲಾಖೆಯ ನಡೆಯನ್ನು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಈ ಕೃತ್ಯದ ಹಿಂದೆ ನಿಷೇಧಿತ PFI ಸಂಘಟನೆಯ ಕೈವಾಡವಿದೆಯೇ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ಹಿಂದೂ ಕಾರ್ಯಕರ್ತರಿಗೆ ನೀಡಲಾಗುತ್ತಿರುವ ಕಿರುಕುಳವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಆಗ್ರಹಿಸಲಾಗಿದೆ. ಈ ರಾಷ್ಟ್ರವಿರೋಧಿ ಶಕ್ತಿಗಳ ವಿರುದ್ಧ ಜಾಗೃತಿ ಮೂಡಿಸಲು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಕರೆ ನೀಡಲಾಗಿದೆ.

[t4b-ticker]
error: Content is protected !!