ಮುಸ್ಲಿಂ ಧರ್ಮವೇ ಶ್ರೇಷ್ಠ ದೇವಸ್ಥಾನಕ್ಕೆ ಹೋಗಲ್ಲ, ಹಜ್ ಯಾತ್ರೆಗೆ ಹೋಗೋ ಆಸೆಯಿದೆ ಎಂದ ಸಚಿವ ರಾಯರೆಡ್ಡಿ!

Picture of Savistara

Savistara

Bureau Report

ಕೊಪ್ಪಳ: ಬೇರೆ ಎಲ್ಲಾ ಧರ್ಮಗಳಿಗಿಂತ ಇಸ್ಲಾಂ ಧರ್ಮ ಶ್ರೇಷ್ಠ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ ಕುಕನೂರಿನಲ್ಲಿ ಆಯೋಜಿಸಿದ್ದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರು ಮಾತನಾಡಿದ್ದು, ಮಠಮಾನ್ಯಗಳಿಗೆ ಹೋಗಬಾರದು.

ನಾನು ಜಾಸ್ತಿ ಹೋಗುವುದಿಲ್ಲ. ಹಜ್ ಯಾತ್ರೆಗೆ ಹೋಗುವ ಆಸೆ ಇದೆ ಎಂದು ಹೇಳಿದರು.ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಆಯೋಜಿಸಲಾಗಿದ್ದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಸ್ಲಾಂ ಧರ್ಮದ ಕುರಿತು ಸಮಾಜದಲ್ಲಿ ಸಾಕಷ್ಟು ತಪ್ಪು ಕಲ್ಪನೆಗಳಿದ್ದು, ಅದನ್ನು ಸರಿಯಾಗಿ ಅರ್ಥೈಸಿಕೊಳ್ಳಲು ತಾವು ಕುರಾನ್ ಅಧ್ಯಯನ ಮಾಡಲು ಸಿದ್ಧರಿರುವುದಾಗಿ ತಿಳಿಸಿದರು. ಇದೇ ವೇಳೆ ಮಠ-ಮಂದಿರಗಳ ಕುರಿತು ಪ್ರಸ್ತಾಪಿಸಿದ ಸಚಿವರು, “ಜನರು ಮಠ-ಮಾನ್ಯಗಳಿಗೆ ಹೋಗುವುದಕ್ಕಿಂತ ಅವುಗಳ ಹಿಂದಿನ ಇತಿಹಾಸವನ್ನು ಅಧ್ಯಯನ ಮಾಡಬೇಕು. ನಾನು ಮಠಗಳಿಗೆ ಹೋಗುವುದು ತೀರಾ ಕಡಿಮೆ” ಎಂದರು. ಅಲ್ಲದೆ, ತಮಗೆ ಹಜ್ ಯಾತ್ರೆ ಕೈಗೊಳ್ಳುವ ತೀವ್ರ ಆಸೆಯಿದೆಯಾದರೂ, ಅಲ್ಲಿಗೆ ತೆರಳಲು ಮತಾಂತರಗೊಳ್ಳುವುದು ಕಡ್ಡಾಯವಾಗಿರುವುದರಿಂದ ಆ ಅವಕಾಶ ತಮಗಿಲ್ಲ ಎಂದು ತಮ್ಮ ಮನದಾಳದ ಮಾತನ್ನು ಹಂಚಿಕೊಂಡರು

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!