ಬೆಳ್ತಂಗಡಿ: ಭ್ರಷ್ಟಾಚಾರ ಆರೋಪ – ಬುರುಡೆ ಪ್ರಕರಣದ ಎಸ್‌ಐಟಿ ಸಿಬ್ಬಂದಿ ಸೇರಿ ಮೂವರು ಪಿಎಸ್‌ಐ ಅಮಾನತು..!!

Picture of Savistara

Savistara

Bureau Report

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ)ಯಲ್ಲಿ ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಆ.31ರಂದು ಅಮಾನತುಗೊಳಿಸಲಾಗಿದೆ. ವಿನೋದ್ ರೆಡ್ಡಿ ಅವರು ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಮುಂಡಗೋಡ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಆದರೆ ವಿಶೇಷ ತನಿಖಾ ದಳ ರಚನೆಯಾದ ಬಳಿಕ ಬೆಳ್ತಂಗಡಿಯ ಎಸ್‌ಐಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಪೊಲೀಸ್ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಡೀಲಿಂಗ್ ಹಾಗೂ ತಿಂಗಳ ಮಾಮೂಲಿ ಕುರಿತು ಮಾತನಾಡಿರುವ ಆಡಿಯೋವೊಂದು ವೈರಲ್ ಆದ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸಲಾಗಿದೆ.ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್‌. ಅವರು ಪಿಎಸ್‌ಐಗಳಾದ ಕಿರಣ್ ಪಾಟೀಲ್, ಕೃಷ್ಣಾ ಅರಿಕೆರೆ ಹಾಗೂ ವಿನೋದ್ ರೆಡ್ಡಿ ಅವರನ್ನು ಆ.31ರಂದು ಅಮಾನತುಗೊಳಿಸಿ ಆದೇಶಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!