ದರ್ಬೆ ಲ್ಯಾಮಿನೇಷನ್‌ ಗಲಾಟೆ ಅಂಜನಾ ಪೈ ಹಾಗೂ ಸುದರ್ಶನ ಪೈಗೆ ಜಾಮೀನು

Picture of Savistara

Savistara

Bureau Report

ದರ್ಬೆಯ ಗ್ರೀಮ್ ಡೆಸ್ಟಿನೇಶನ್ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಗಲಾಟೆಯ ಸಂದರ್ಭ ಕಾಲಿಗೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಂಜನಾ ಪೈ ಪ್ರಕರಣದಲ್ಲಿ ಆರೋಪಿಯಾಗಿದ್ದರು.

ಇದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಅವರ ಪುತ್ರ ಸುದರ್ಶನ್ ಪೈ ಅವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಸುಳ್ಯ ತಾಲ್ಲೂಕಿನ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ಸಾನ್ (32) ಅವರು ಅಂಜನಾ ಪೈ ಹಾಗೂ ಸುದರ್ಶನ್ ಪೈ ವಿರುದ್ಧ ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಜನನ ಪ್ರಮಾಣ ಪತ್ರದ ಲ್ಯಾಮಿನೇಷನ್ ವೇಳೆ ದಾಖಲಾತಿ ಹಾನಿಗೊಳಗಾದ ವಿಚಾರವಾಗಿ ವಾಗ್ವಾದ ನಡೆದಿದ್ದು, ಈ ಸಂದರ್ಭ ಅಂಗಡಿಯಲ್ಲಿದ್ದ ಅಂಜನಾ ಪೈ ಹಾಗೂ ಸುದರ್ಶನ್ ಪೈ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಸುದರ್ಶನ್ ಪೈ ಅವರು ತನಗೆ ಹಾಗೂ ತನ್ನ ತಂಗಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ತನ್ನ ತಮ್ಮನನ್ನು ಗಾಜಿಗೆ ತಳ್ಳಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಫಾತಿಮತ್ ಮಿಸ್ಸಾನ್ ದೂರಿನಲ್ಲಿ ಆರೋಪಿಸಿದ್ದರು.ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 352, 115(2), 109 8 3(5) ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

News Updates

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ -ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

[t4b-ticker]
error: Content is protected !!