ಮಂಗಳೂರು ರೈಲ್ವೆ ಜಾಲ ನೈರುತ್ಯ ವಲಯಕ್ಕೆ ಸೇರ್ಪಡೆ | ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ರವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಸಂಸದ ಕ್ಯಾ. ಚೌಟ

Picture of Savistara

Savistara

Bureau Report

ನವದೆಹಲಿ: ಮಂಗಳೂರು ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವ ಮೂಲಕ ಕರಾವಳಿ ಭಾಗದ ಬಹು ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಇಂದು ಸಚಿವರನ್ನು ಖುದ್ದು ಭೇಟಿಯಾದ ಸಂಸದರು, ಮಂಗಳೂರನ್ನು ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಿದ ಪ್ರಕ್ರಿಯೆಗೆ ಸ್ಪಂದಿಸಿದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಇದೇ ವೇಳೆ ಪ್ರತಿಕ್ರಿಯಿಸಿದ ಸಚಿವರು, ಕರಾವಳಿ ಭಾಗದ ರೈಲ್ವೆ ಯೋಜನೆಗಳಿಗೆ ಮುಂದೆಯೂ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ.ಚೌಟ ಅವರು, “ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದ ಈ ಪ್ರಮುಖ ಆಡಳಿತಾತ್ಮಕ ಬದಲಾವಣೆಯು ಈ ಭಾಗದ ರೈಲ್ವೆ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ನಿರ್ವಹಣೆಯನ್ನು ಇನ್ನಷ್ಟು ಸಮರ್ಥಗೊಳಿಸುವುದಲ್ಲದೆ, ಕರ್ನಾಟಕದ ರೈಲ್ವೆ ಜಾಲದೊಂದಿಗೆ ಮಂಗಳೂರಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲಿದೆ. ಹಲವು ದಶಕಗಳ ಈ ನಿರ್ಧಾರದಿಂದ ಕರಾವಳಿ ಭಾಗದ ರೈಲ್ವೆ ಅಭಿವೃದ್ಧಿ ಹಾಗೂ ಪ್ರಯಾಣಿಕರ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ಸಿಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!