ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನವಾಹನ ಸವಾರರಿಗೆ ಬಿಗ್ ಶಾಕ್ ಎದುರಾಗಿದೆ. ನಗರದ ಪ್ರಮುಖ ಫೈಓವರ್‌ಗಳಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ರಸ್ತೆ ಸುರಕ್ಷತೆ ದೃಷ್ಟಿಯಿಂದ ಹೊಸ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ.
ಸೆಪ್ಟೆಂಬರ್ 4ರಿಂದ ಹೊಸ ಸಂಚಾರ ನಿಯಮ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್ ಸಿಟಿ ಫೈಓವರ್‌ನಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಸೆಪ್ಟೆಂಬರ್ 11ರಿಂದ ಸಂಪೂರ್ಣ ನಿರ್ಬಂಧ ವಿಧಿಸಲಾಗುತ್ತದೆ. ನಗರದ ಪ್ರಮುಖ ಫೈಓವರ್‌ಗಳಲ್ಲಿ ದ್ವಿಚಕ್ರ ವಾಹನಗಳಷ್ಟೇ ಅಲ್ಲದೆ, ಭಾರಿ, ಮಧ್ಯಮ ಹಾಗೂ ಇತರೆ ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೂ ನಿರ್ದಿಷ್ಟ ಸಮಯದಲ್ಲಿ ನಿರ್ಬಂಧ ಹೇರಲಾಗಿದೆ.
ಎಲ್ಲೆಲ್ಲಿ ಏನೇನು ನಿರ್ಬಂಧ?
ಬಿಜಿಎಸ್ ಫೈಓವರ್, ಮೈಸೂರು ರಸ್ತೆ
ಭಾರಿ ಸರಕು ಸಾಗಾಣಿಕೆ ವಾಹನಗಳಿಗೆ 24 ಗಂಟೆಯೂ ಸಂಚಾರ ನಿಷೇಧ. ಇತರೆ ಸರಕು ಸಾಗಾಣಿಕೆ ವಾಹನಗಳು ಹಾಗೂ ಗೂಡ್ಸ್ ಆಟೋಗಳಿಗೆ ಬೆಳಗ್ಗೆ 7ರಿಂದ 11ರವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10ರವರೆಗೆ ನಿರ್ಬಂಧ.
ಪೀಣ್ಯ ಎಲಿವೇಟೆಡ್ ಕಾರಿಡಾರ್
ಬಾರಿ ಹಾಗೂ ಮಧ್ಯಮ ಸರಕು ಸಾಗಾಣಿಕೆ ವಾಹನಗಳಿಗೆ 24 ಗಂಟೆಯೂ ಸಂಚಾರ ನಿಷೇಧ. ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಬೆಳಗ್ಗೆ 7ರಿಂದ 11 ಹಾಗೂ ಸಂಜೆ 4ರಿಂದ ರಾತ್ರಿ 10ರವರೆಗೆ ನಿರ್ಬಂಧ.
ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್
ಎಲ್ಲಾ ಮಾದರಿಯ ಸರಕು ಸಾಗಾಣಿಕೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ. ದ್ವಿಚಕ್ರ ವಾಹನಗಳಿಗೆ 24 ಗಂಟೆಯೂ ಸಂಚಾರ ಬಂದ್. ಪ್ರಯಾಣಿಕರ ಆಟೋರಿಕ್ಷಾ ಹಾಗೂ ಗೂಡ್ಸ್ ಆಟೋಗಳಿಗೂ 24 ಗಂಟೆ ನಿರ್ಬಂಧ.
ಡಬಲ್ ಡೆಕ್ಕರ್ ಫೈಓವರ್ – ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡ
ಭಾರಿ ಸರಕು ಸಾಗಾಣಿಕೆ ವಾಹನಗಳಿಗೆ 24 ಗಂಟೆಯೂ ಸಂಚಾರ ನಿಷೇಧ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್ ನಲ್ಲಿ ದ್ವಿಚಕ್ರ ವಾಹನಗಳಿಗೆ 24 ಗಂಟೆ ಸಂಚಾರ ನಿರ್ಬಂಧ. ಆಟೋರಿಕ್ಷಾಗಳಿಗೂ 24 ಗಂಟೆ ಬಂದ್. ಎಲ್ಲಾ ವಿಧದ ಸರಕು ಸಾಗಾಣಿಕೆ ವಾಹನಗಳಿಗೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿರ್ಬಂಧ.
ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಸಂಚಾರಿ ಪೊಲೀಸರು ಈ ನಿರ್ಬಂಧಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ. ಹೀಗಾಗಿ ಪ್ರಮುಖ ಫೈಓವರ್‌ಗಳನ್ನು ಬಳಸುವ ಬೈಕ್ ಸವಾರರು ಹಾಗೂ ಆಟೋರಿಕ್ಷಾ, ಸರಕು ಸಾಗಾಣಿಕೆ ವಾಹನಗಳ ಚಾಲಕರು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಬಹುದು.

















































