ಸುಳ್ಯ :13ನೇ ವರ್ಷದ ಅದ್ದೂರಿ ಮೊಸರು ಕುಡಿಕೆ ಉತ್ಸವ | ಈ ಬಾರಿಯ ಆಕರ್ಷಣೆಗಳೇನು ಗೊತ್ತಾ?ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟಕರು

Picture of Savistara

Savistara

Bureau Report

ಸುಳ್ಯದ ವಿಶ್ವ ಹಿಂದೂ ಪರಿಷತ್‌, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್ 8ರಂದು 13ನೇ ವರ್ಷದ ಅದ್ದೂರಿ ಮೊಸರು ಕುಡಿಕೆ ಉತ್ಸವ ಆಯೋಜಿಸಲಾಗಿದೆ ಎಂದು ಸೆಪ್ಟೆಂಬರ್ 2ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟಕರು ವಿವರ ನೀಡಿದ್ದಾರೆ.​

ಶೋಭಾಯಾತ್ರೆ ಮತ್ತು ಚಾಲನೆ: ಅಪರಾಹ್ನ 2:00 ಗಂಟೆಗೆ ಚೆನ್ನಕೇಶವ ದೇವಸ್ಥಾನದ ಎದುರಿನಿಂದ ಅಟ್ಟಿ ಮಡಕೆ ಒಡೆಯುವ ಶೋಭಾಯಾತ್ರೆ ಆರಂಭಗೊಳ್ಳಲಿದ್ದು, ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರರಾದ ಡಾ. ಹರಪ್ರಸಾದ್ ತುದಿಯಡ್ಕ ಚಾಲನೆ ನೀಡಲಿದ್ದಾರೆ.

​ವಿಶೇಷ ಸ್ಪರ್ಧೆಗಳು ಮತ್ತು ಆಕರ್ಷಣೆ: ಬೆಳಿಗ್ಗೆ ದೇವಸ್ಥಾನದ ಮುಂಭಾಗದಲ್ಲಿ ‘ಎಣ್ಣೆ ಕಂಬ’ ಏರುವ ಆಕರ್ಷಣೀಯ ಸ್ಪರ್ಧೆ ನಡೆಯಲಿದೆ. ಮಹಿಳೆಯರಿಗಾಗಿ ಕಣ್ಣಿಗೆ ಬಟ್ಟೆ ಕಟ್ಟಿ ಮಡಕೆ ಒಡೆಯುವ ಸ್ಪರ್ಧೆ ಆಯೋಜಿಸಲಾಗಿದೆ. ಶೋಭಾಯಾತ್ರೆಯ ಪಥದಲ್ಲಿ ಗೊಂಬೆ ಕುಣಿತ, ವಯಲಿನ್ ವಿದ್ ಸಿಂಗಾರಿಮೇಳ ಹಾಗೂ ಕುಣಿತ ಭಜನಾ ತಂಡಗಳು ಭಾಗವಹಿಸಲಿವೆ.​

ಧಾರ್ಮಿಕ ಸಭಾ ಕಾರ್ಯಕ್ರಮ: ಸಂಜೆ 6:00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಮರ್ಕಂಜ ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮದರ್ಶಿ ಔಘಡ್ ಪೀರ್ ಯೋಗಿ ರಾಜೇಶ್ ನಾಥ್ ಜೀ ಉದ್ಘಾಟಿಸಲಿದ್ದು, ಡಾ. ಅರುಣ್ ಉಳ್ಳಾಲ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಇದೇ ವೇಳೆ ದೈವ ನರ್ತಕ ರಾಜೇಶ್ ಪಣಿಕ್ಕರ್ ಮೇನಾಲ ಅವರನ್ನು ಸನ್ಮಾನಿಸಲಾಗುವುದು.​

ಆಕರ್ಷಕ ನಗದು ಬಹುಮಾನ: ಎಣ್ಣೆ ಕಂಬ ಸ್ಪರ್ಧೆಯ ವಿಜೇತರಿಗೆ 5,000 ರೂ. ಹಾಗೂ ಅಟ್ಟಿ ಮಡಕೆ ಒಡೆಯುವ ಸ್ಪರ್ಧೆಯ ವಿಜೇತ ತಂಡಗಳಿಗೆ ಪ್ರಥಮ (17,013 ರೂ.), ದ್ವಿತೀಯ (12,013 ರೂ.) ಮತ್ತು ತೃತೀಯ (9,013 ರೂ.) ನಗದು ಬಹುಮಾನದೊಂದಿಗೆ ಶಾಶ್ವತ ಫಲಕ ನೀಡಲಾಗುವುದು.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

[t4b-ticker]
error: Content is protected !!