ಸುಳ್ಯ: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಮೃತ್ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಅಸಮರ್ಪಕತೆಯ ಬಗ್ಗೆ ಸಂಸದರು ಅಧಿಕಾರಿಗಳ ಜೊತೆ ಸುಳ್ಯದ ನಿರೀಕ್ಷಣಾ ಮಂದಿರದಲ್ಲಿ ಸಭೆ ನಡೆಸಿದರು.
ಈ ಸಭೆಯಲ್ಲಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತೆ ಸ್ಥೆಲ್ಲಾ ವರ್ಗೀಸ್, ಸುಳ್ಯ ತಹಶೀಲ್ದಾರ್ ಮಂಜುಳಾ, ಶಾಸಕಿ ಭಾಗೀರಥಿ ಮುರುಳ್ಯ, ನಗರ ಪಂಚಾಯತ್ ಮುಖ್ಯಾಧಿಕಾರಿ ಭಾಗವಹಿಸಿದ್ದರು.

ಈ ವೇಳೆ ಸಂಸದರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, “ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಸಹಿಸಲು ಸಾಧ್ಯವಿಲ್ಲ, ತ್ವರಿತವಾಗಿ ಕಾಮಗಾರಿ ಮುಗಿಸಬೇಕು” ಎಂದು ಸೂಚಿಸಿದರು.
ಇದೇ ವೇಳೆ ಸುಳ್ಯದ ಕಸ ವಿಲೇವಾರಿ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸರಿಯಾದ ವಿಲೇವಾರಿ ವ್ಯವಸ್ಥೆ ಇಲ್ಲದಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಸರ್ಕಾರದ ಮಟ್ಟದಲ್ಲಿ ಇದಕ್ಕೆ ಪರಿಹಾರ ಕಂಡುಕೊಳ್ಳುವುದಾಗಿ ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಮುಖರಾದ ಶಿವಾನಂದ ಕುಕ್ಕುಂಬಳ, ಕುಸುಮಾಧರ ಎ.ಟಿ, ಜಗನ್ನಾಥ ಜಯನಗರ, ಪುಷ್ಪ ಮೇದಪ್ಪ ಮತ್ತಿತರರು ಉಪಸ್ಥಿತರಿದ್ದರು

















































