ಕಡಬ:ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿದ್ದ ಪೌಲೋಸ್ ಎಂಬುವವರು ಗ್ರಾಮ ಪಂಚಾಯತ್ ಸಭೆಯಲ್ಲಿ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದ ವೇಳೆ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.ಗ್ರಾಮ ಪಂಚಾಯತ್ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರಗೀತೆ ಪ್ರಸಾರವಾಗುತ್ತಿದ್ದಾಗ ಅದಕ್ಕೆ ಧಿಕ್ಕಾರ ಕೂಗಿ, ತಡೆದು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ರಾಷ್ಟ್ರಗೀತೆಗೆ ಅಪಚಾರ ಎಸಗಿರುವ ಇವರ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಬೇಕು.
ಅಲ್ಲದೆ ರಾಷ್ಟ್ರಗೀತೆಯ ಮಹತ್ವ ಅರಿಯದೆ ಅವಮಾನಿಸಿದ ಇವರ ಪಂಚಾಯತ್ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.ಘಟನೆಯ ಸಮಯದಲ್ಲಿ ರಾಷ್ಟ್ರಗೀತೆಗೆ ಗೌರವ ನೀಡದೆ ಓಡಾಡಿಕೊಂಡಿದ್ದ ಅವರ ಸಹಚರರ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಮಂಗಳೂರು ಪೊಲೀಸ್ ವರಿಷ್ಠಾಧಿಕಾರಿಗಳು ಕೂಡಲೇ ಇವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ದೂರುದಾರರು ವಿನಂತಿಸಿದ್ದಾರೆ.ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
















































