ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ’ ರಿಗೆ ಎಸ್‌ಐಆ‌ರ್ ನೋಟೇಸ್..! ಬಹಿರಂಗವಾಗುತ್ತಿದ್ದಂತೆ ಕ್ಷಮೆಯಾಚಿಸಿದ ಚುನಾವಣ ಆಯೋಗ

Picture of Savistara

Savistara

Bureau Report

ಮಂಗಳೂರು : ಬೀದಿ ಬದಿ ಕಿತ್ತಳೆ ಹಣ್ಣನ್ನು ಮಾರಾಟ ಮಾಡಿ ಊರಿಗೆ ಶಾಲೆ ಕಟ್ಟಿಸಿ ಹೆಸರುವಾಸಿಯಾಗಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿ ಸೋಮವಾರ ನೋಟಿಸ್‌ ಜಾರಿ ಮಾಡಿದ್ದು, ಬಳಿಕ ಹಿಂಪಡೆದಿದೆ.

ಮಂಗಳೂರು ವಿಧಾನ ಸಭಾ ಕ್ಷೇತ್ರದ 2002ರ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ‘ಹಾಜಬ್ಬ’ ಎಂದು ಮಾತ್ರ ನಮೂದಾಗಿತ್ತು. ಅವರು ಈಗ ಹೊಂದಿರುವ ಪಡಿತರ ಚೀಟಿ, ಆಧಾ‌ರ್, ಪಾಸ್‌ಪೋರ್ಟ್, ಮತದಾರರ ಗುರುತಿನ ಚೀಟಿಗಳಲ್ಲಿ ಅವರ ಹೆಸರು ‘ಹರೇಕಳ ಹಾಜಬ್ಬ’ ಎಂದು ಇದೆ. ಹೆಸರು ತಾಳೆ ಆಗದ ಕಾರಣಕ್ಕೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಗೊತ್ತಾಗಿದೆ.

ಸೆಪ್ಟೆಂಬರ್ 11ರಂದು ಗ್ರಾಮ ಪಂಚಾಯಿತಿಗೆ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಹಾಜಬ್ಬರಿಗೆ ನೋಟಿಸ್ ನೀಡಲಾಗಿತ್ತು.

ನೋಟೀಸ್ ನೀಡಿದ ಬಳಿಕ ಆದ ಪ್ರಮಾದದ ಬಗ್ಗೆ ಎಚ್ಚೆತ್ತ ಅಧಿಕಾರಿಗಳು ಮನೆಗೆ ಬಂದು ದಾಖಲೆಗಳನ್ನು ಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ವಿಷಯ ಬಹಿರಂಗ ಆಗುತ್ತಿದ್ದಂತೆ ಚುನಾವಣಾ ಆಯೋಗದ ಅಧಿಕಾರಿಗಳು ಹರೇಕಳ ಹಾಜಬ್ಬರ ಬಳಿ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!