ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್ ಚುನಾವಣೆ: ಡಿಕೆಶಿ-ಸಿದ್ದರಾಮಯ್ಯ ಗುದ್ದಾಟ?

Picture of Savistara

Savistara

Bureau Report

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷಉಪಾಧ್ಯಕ್ಷ ಸ್ಥಾನಗಳಿಗೆ ಇದೇ 10ರಂದು ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ಶುರುವಾಗಿದೆ.

ಸಿದ್ದರಾಮಯ್ಯ ಅವರ ನಿವಾಸಕ್ಕೆ ಶಾಸಕರೊಂದಿಗೆ ಮಂಗಳವಾರ ಭೇಟಿ ನೀಡಿದ ಶಿವಕುಮಾರ್ ಈ ಬಗ್ಗೆ ಚರ್ಚೆ ನಡೆಸಿದರು.ವಿಧಾನಪರಿಷತ್‌ ಸದಸ್ಯ ಎಸ್. ರವಿ ಅಥವಾ ಬಿಜೆಪಿಯಿಂದ ಉಚ್ಚಾಟಿತ ಶಾಸಕ ಶಿವರಾಂ ಹೆಬ್ಬಾ‌ರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವ ಪ್ರಸ್ತಾವವನ್ನು ಶಿವಕುಮಾರ್ ಮುಂದಿಟ್ಟರು ಎಂದು ಗೊತ್ತಾಗಿದೆ.ಅದಕ್ಕೆ ಒಪ್ಪದ ಸಿದ್ದರಾಮಯ್ಯ, ‘ನಿರ್ದೇಶಕರ ಬೆಂಬಲ ಇರುವವರು ಅಧ್ಯಕ್ಷರಾಗಬೇಕು. ಕೆ.ಎನ್. ರಾಜಣ್ಣ ಅವರಿಗೆ ಅನುಭವ ಹಾಗೂ ನಿರ್ದೇಶಕರ ಬೆಂಬಲವಿದೆ. ಅಲ್ಲದೆ, ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿದ ಬಳಿಕ ನಾಗೇಂದ್ರ ಅವರನ್ನೂ ಇಳಿಸಿದ್ದೇವೆ. ಪರಿಶಿಷ್ಟ ಸಮುದಾಯಕ್ಕೆ ಕೆಟ್ಟ ಸಂದೇಶ ರವಾನೆ ಆಗಬಾರದು ಎಂದರೆ ರಾಜಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ವಾದ ಮುಂದಿಟ್ಟಿದ್ದಾರೆ’ ಎಂದು ತಿಳಿದುಬಂದಿದೆ.ಶಿವಕುಮಾ‌ರ್ ಅವರು ಶಿವರಾಂ ಹೆಬ್ಬಾರ್ ಒಬ್ಬರ ಹೆಸರನ್ನೇ ಮುಂದೆ ತೇಲಿಬಿಟ್ಟರೂ ಸಿದ್ದರಾಮಯ್ಯ ಒಪ್ಪಿಲ್ಲ. ತಮ್ಮ ಸ್ಪಷ್ಟ ನಿಲುವನ್ನು ಸಿದ್ದರಾಮಯ್ಯ ಅವರು ಪಕ್ಷದ ವರಿಷ್ಠರಿಗೂ ತಿಳಿಸುವ ಸಾಧ್ಯತೆಯಿದೆ ಎಂದು ಗೊತ್ತಾಗಿದೆಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಡಿ.ಕೆ. ಶಿವಕುಮಾರ್ ಅವರು ಬುಧವಾರ (ಸೆ.9) ನಿರ್ದೇಶಕರ ಸಭೆ ನಡೆಸುವ ಸಾಧ್ಯತೆಯಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!