ಪ್ರಧಾನಿ ಮೋದಿ ಸಾರ್ವಜನಿಕ ಬದುಕಿಗೆ 25 ವರ್ಷ: ಬಿಜೆಪಿಯಿಂದ ಒಂದು ತಿಂಗಳು ಸಂಕಲ್ಪ ಸೇವಾ ಅಭಿಯಾನ!

Picture of Savistara

Savistara

Bureau Report

ನವದೆಹಲಿ: ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ.Rally ಗಳು, ಸಂವಾದ ಮತ್ತು ಸರ್ಕಾರದ ಕಾರ್ಯಕ್ರಮಗಳು ಹಾಗೂ ಉತ್ತಮ ಆಡಳಿತ ಕುರಿತು ಜನ ಸಾಮಾನ್ಯರೊಂದಿಗೆ ಸಮಾಲೋಚನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳು ಸೆಪ್ಟೆಂಬರ್ 17 ರಂದು ಪ್ರಧಾನಿ ಮೋದಿ ಅವರ ಜನ್ಮದಿನದಂದು ಪ್ರಾರಂಭವಾಗಲಿವೆ.ಪ್ರಧಾನಿ ಮೋದಿ ಅವರ ಸಾರ್ವಜನಿಕ ಬದುಕಿಗೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕೃತಜ್ಞತೆ ಸಲ್ಲಿಸಲು ಸೆಪ್ಟೆಂಬರ್ 17 ರಂದು ‘ಆಶೀರ್ವಾದ್ ಕೆ ದಿಯೇ’ (ಆಶೀರ್ವಾದದ ದೀಪ) ಕಾರ್ಯಕ್ರಮವನ್ನು ಆಯೋಜಿಸಲು ಬಿಜೆಪಿ ಯೋಜಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.ಸೆಪ್ಟೆಂಬರ್ 17 ರಂದು ಪ್ರಧಾನಿ ಮೋದಿ ಅವರ ಜನ್ಮದಿನವನ್ನು ‘ಸೇವಾ ದಿವಸ’ವನ್ನಾಗಿ ಆಚರಿಸಲಾಗುವುದು ಮತ್ತು ಸಾರ್ವಜನಿಕ ಜೀವನದಲ್ಲಿ ಅವರ 25 ವರ್ಷಗಳ ಸೇವೆಯ ಅಂಗವಾಗಿ ಪಕ್ಷವು ಅಂದೇ ಒಂದು ತಿಂಗಳ ಕಾಲ ನಡೆಯುವ ‘ಸೇವಾ ಸಂಕಲ್ಪ’ ಅಭಿಯಾನವನ್ನು ಪ್ರಾರಂಭಿಸಲಿದೆ ಎಂದೂ ಅವರು ಹೇಳಿದರು.

“ಸೆಪ್ಟೆಂಬರ್ 17 ರಂದು ದೇಶಾದ್ಯಂತ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುವುದು ಮತ್ತು ಅಂದು ಸಂಜೆ ಜನರು ತಮ್ಮ ಮನೆಗಳಲ್ಲಿ ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮದಡಿ ದೀಪಗಳನ್ನು ಬೆಳಗಿಸಲಿದ್ದಾರೆ. ಕಳೆದ 25 ವರ್ಷಗಳಲ್ಲಿ ಪ್ರಧಾನಿ ಮೋದಿ ಸಲ್ಲಿಸಿದ ಸಾರ್ವಜನಿಕ ಸೇವೆಗೆ ಕೃತಜ್ಞತೆ ಸಲ್ಲಿಸುವುದು ಈ ಕಾರ್ಯಕ್ರಮದ ಸ್ಪಷ್ಟ ಉದ್ದೇಶವಾಗಿದೆ.ಮೋದಿ ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರತಿಯೊಬ್ಬ ಫಲಾನುಭವಿಯೂ ಸಹ ಪ್ರಧಾನ ಮಂತ್ರಿಯವರಿಗೆ ತಮ್ಮ ಆಶೀರ್ವಾದ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಲು ತಮ್ಮ ಮನೆಯಲ್ಲಿ ದೀಪವನ್ನು ಬೆಳಗಿಸಲಿದ್ದಾರೆ ಎಂದು ಅವರು ಹೇಳಿದರು.”ಅಕ್ಟೋಬರ್ 7 ರಂದು ಪ್ರಧಾನಿ ಮೋದಿ ಅವರು ಸರ್ಕಾರದ ಮುಖ್ಯಸ್ಥರಾಗಿ ಎರಡು ವರ್ಷಗಳನ್ನು ಪೂರೈಸುವ ಸಂದರ್ಭದಲ್ಲಿ ನಾವು ‘ಸೇವಾ ಜ್ಯೋತಿ ಕಲಶ ಯಾತ್ರೆ’ಯನ್ನು ಸಹ ಆಯೋಜಿಸುತ್ತೇವೆ. ಈ ಕಾರ್ಯಕ್ರಮದ ಭಾಗವಾಗಿ ದೇಶಾದ್ಯಂತ ಬೈಕ್ Rally ಮತ್ತು ಪಾದಯಾತ್ರೆಗಳನ್ನು ನಡೆಸಲಾಗುವುದು ಹಾಗೂ ಜನರು ಒಗ್ಗೂಡಿ ‘ವಿಕಸಿತ ಭಾರತ’ವನ್ನು ನಿರ್ಮಿಸುವ ಸಂಕಲ್ಪವನ್ನು ಕೈಗೊಳ್ಳಲಿದ್ದಾರೆ,” ಎಂದು ಅವರು ಹೇಳಿದರು.

ಸೇವಾ ಸಂಕಲ್ಪ ಅಭಿಯಾನ’ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ಮುಂದುವರಿಯಲಿದ್ದು, ಈ ಅವಧಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಪ್ರತಿ ವರ್ಷದಂತೆ ಈ ಬಾರಿಯೂ ಅಕ್ಟೋಬರ್ 2 ರಂದು ಬಿಜೆಪಿ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಿದೆ ಎಂದು ನಿತಿನ್ ತಿಳಿಸಿದರು.ಪಕ್ಷದ ಯುವ ಕಾರ್ಯಕರ್ತರು ವಡೋದರಾದಿಂದ ವಾರಣಾಸಿಯವರೆಗೆ 20 ತಂಡಗಳಲ್ಲಿ 1,000 ಯುವಕರನ್ನು ಒಳಗೊಂಡ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಅಲ್ಲದೆ, ಪಕ್ಷದ ನಾಯಕರ ನೇತೃತ್ವದಲ್ಲಿ ದೇಶಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಚುನಾಯಿತ ಪಂಚಾಯತ್ ಪ್ರತಿನಿಧಿಗಳು ಮತ್ತು ಇತರರೊಂದಿಗೆ ‘ಸುಶಾಸನ ಸಂವಾದ’ (ಉತ್ತಮ ಆಡಳಿತ ಕುರಿತ ಸಂವಾದ) ಕಾರ್ಯಕ್ರಮಗಳನ್ನೂ ನಡೆಸಲಾಗುವುದು ಎಂದು ಅವರು ವಿವರಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!