ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ನೇಮಕ

Picture of Savistara

Savistara

Bureau Report

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಅನುಮೋದನೆಯ ಮೇರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ನೇಮಕಾತಿ ಪ್ರಕಟಿಸಲಾಗಿದೆ. ಸೆ.9, 2026ರಿಂದಲೇ ನೇಮಕಾತಿಗಳು ಜಾರಿಗೆ ಬಂದಿವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ಆ‌ರ್. ಪೂಜಾರಿ ಅವರ ಹೆಸರನ್ನು ಪಟ್ಟಿಯಲ್ಲಿ ನಮೂದಿಸಲಾಗಿದೆ.ಕಾಂಗ್ರೆಸ್‌ನ ‘ಸಂಘಟನ ಸೃಜನ ಅಭಿಯಾನ’ದ ಭಾಗವಾಗಿ ಈ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಪ್ರತಿ ಜಿಲ್ಲೆಯ ಎಐಸಿಸಿ ವೀಕ್ಷಕರು ಜಿಲ್ಲಾ ಮಟ್ಟದಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ವಿವಿಧ ಪ್ರಮುಖರೊಂದಿಗೆ ಸಮಗ್ರ ಸಮಾಲೋಚನೆ ನಡೆಸಿ ವರದಿ ಸಲ್ಲಿಸಿದ್ದರು.ಬಳಿಕ ವೀಕ್ಷಕರೊಂದಿಗೆ ಹಾಗೂ ಹಿರಿಯ ನಾಯಕರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿ ಅಧ್ಯಕ್ಷರ ನೇಮಕಾತಿ ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ತಿಳಿಸಿದೆ.ಇದೇ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಿಶನ್ ಕುಮಾರ್ ಹೆಗ್ಡೆ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕದ ಒಟ್ಟು 35 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ಪಟ್ಟಿಯನ್ನು ಎಐಸಿಸಿ ಪ್ರಕಟಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!