ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಆದೇಶ ಹೊರಡಿಸಿದೆ.13ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನೇಮಕಾತಿ ಆದೇಶ ಹೊರಡಿಸಿದ್ದು, ಈ ಹಿಂದೆ ಕಿಶನ್ ಹೆಗ್ಡೆ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿತ್ತು. ಬಳಿಕ ಆ ನೇಮಕಾತಿಯನ್ನು ತಡೆಹಿಡಿಯಲಾಗಿತ್ತು.ಇತ್ತೀಚೆಗೆ ಎಐಸಿಸಿ ವೀಕ್ಷಕರನ್ನು ನೇಮಿಸಿ, ‘ಸಂಘಟನ್ ಅಭಿಯಾನ್’ ಅಡಿಯಲ್ಲಿ ಜಿಲ್ಲೆಯಲ್ಲಿ ನಾಯಕರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ವೀಕ್ಷಕರು ಸಲ್ಲಿಸಿದ ವರದಿ ಆಧರಿಸಿ ಇದೀಗ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
















































